ಭರೂಚ್(ಗುಜರಾತ್):ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ಐದು ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಭರೂಚ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಅಹಮದಾಬಾದ್‌ನಿಂದ 235 ಕಿಲೋ ಮೀಟರ್ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದಲ್ಲಿನ ಘಟಕದಲ್ಲಿ ಇಂದು(ಸೋಮವಾರ) ಮುಂಜಾನೆ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ.
ರಾಸಾಯನಿಕ ಫ್ಯಾಕ್ಟರಿಯಲ್ಲಿ ಸ್ಫೋಟ, ಐವರು ದುರ್ಮರಣ - ಗುಜರಾತ್ ಅಪರಾಧ ಸುದ್ದಿ
ಗುಜರಾತ್ನ ಭರೂಚ್‌ನಲ್ಲಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಿಂದಾಗಿ 5 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಓದಿ:ವಿಡಿಯೋ: ಒಂದಲ್ಲ, ಎರಡಲ್ಲ.. ಬರೋಬ್ಬರಿ 8 ಸಿಲಿಂಡರ್ಗಳ ಸ್ಫೋಟ!
ರಿಯಾಕ್ಟರ್ ಬಳಿ ಆರು ಜನರು ಕೆಲಸ ಮಾಡುತ್ತಿದ್ದರು. ದ್ರಾವಕ ಭಟ್ಟಿ ಇಳಿಸುವ ಪ್ರಕ್ರಿಯೆಯಲ್ಲಿ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿತು ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ಹೇಳಿದ್ದಾರೆ. ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತು. ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ಎಲ್ಲಾ ಐದು ಜನರು ಸಾವನ್ನಪ್ಪಿದರು. ನಂತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ಬೆಂಕಿಯನ್ನು ಸಹ ನಿಯಂತ್ರಣಕ್ಕೆ ತರಲಾಯಿತು. ಘಟನೆಯಲ್ಲಿ ಬೇರೆ ಯಾರೂ ಗಾಯಗೊಂಡಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.