ರಾಂಚಿ(ಜಾರ್ಖಂಡ್):ಭಾರತೀಯ ಜನತಾ ಪಾರ್ಟಿಯ ಮಾಜಿ ಶಾಸಕ ಗುರುಚರಣ್ ನಾಯಕ ಮೇಲೆ ನಕ್ಸಲರು ದಾಳಿ ನಡೆಸಿದ್ದು, ಈ ವೇಳೆ ಅವರ ಇಬ್ಬರು ಅಂಗರಕ್ಷಕರನ್ನು ಹತ್ಯೆಗೈದಿದ್ದಾರೆ.
ಗೋಯೆಲ್ಕೆರಾದ ತುನಿಯಾ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಫುಟ್ಬಾಲ್ ಸ್ಪರ್ಧೆಯಲ್ಲಿ ಗುರುಚರಣ್ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದರು. ಈ ವೇಳೆ ದಾಳಿ ನಡೆಸಲಾಗಿದ್ದು, ಮಾಜಿ ಶಾಸಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.