ಕರ್ನಾಟಕ

karnataka

ETV Bharat / bharat

ಪುಣೆಯಲ್ಲಿ ಕರ್ನಾಟಕ ಸಾರಿಗೆ ಬಸ್‌ಗೆ ಕಪ್ಪು ಮಸಿ: ಮರಾಠ ಮಹಾಸಂಘ ಉದ್ಧಟತನ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಗಡಿ ವಿವಾದದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗಳನ್ನು ವಿರೋಧಿಸಿ ಮರಾಠ ಮಹಾಸಂಘ ಪ್ರತಿಭಟನೆ ನಡೆಸಿತು.

Maratha Mahasangh protest against Kartana CM Bommai
ಕರ್ನಾಟಕ ಸಿಎಂ ವಿರುದ್ಧ ಮರಾಠ ಒಕ್ಕೂಟ ಪ್ರತಿಭಟನೆ

By

Published : Nov 25, 2022, 9:08 AM IST

Updated : Nov 25, 2022, 9:35 AM IST

ಪುಣೆ(ಮಹಾರಾಷ್ಟ್ರ): ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಇತ್ತೀಚೆಗಿನ ಹೇಳಿಕೆಗಳನ್ನು ವಿರೋಧಿಸಿ ಮರಾಠ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು. ಮರಾಠ ಮಹಾಸಂಘದ ಸದಸ್ಯರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ಗೆ ಕಪ್ಪು ಮಸಿ ಬಳಿದರು.

ಬೊಮ್ಮಾಯಿ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಪುಣೆ ಜಿಲ್ಲೆಯ ದೌಂಡ್‌ನಲ್ಲಿ ನಿಪ್ಪಾಣಿ-ಔರಂಗಾಬಾದ್ ಬಸ್‌ನಲ್ಲಿ "ಜೈ ಮಹಾರಾಷ್ಟ್ರ" ಮತ್ತು "ಜಾಹಿರ್ ನಿಷೇಧ್" (ಖಂಡನೆ) ಪದಗಳನ್ನು ಕಪ್ಪು ಬಣ್ಣದಲ್ಲಿ ಚಿತ್ರಿಸಿದ್ದಾರೆ.

ಸಿಎಂ ಬೊಮ್ಮಾಯಿ ವಿರುದ್ಧ ಮರಾಠ ಒಕ್ಕೂಟ ಪ್ರತಿಭಟನೆ

ಇದನ್ನೂ ಓದಿ:ಗಡಿ ವಿವಾದ: ದೇವೇಂದ್ರ ಫಡ್ನವೀಸ್ ಕನಸು ನನಸಾಗಲ್ಲ ಎಂದ ಸಿಎಂ ಬೊಮ್ಮಾಯಿ‌

ಸಿಎಂ ಬೊಮ್ಮಾಯಿ ಹೇಳಿದ್ದೇನು?: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದಿದ್ದರು.

ಕರ್ನಾಟಕದ ಗಡಿ ಜಿಲ್ಲೆಗಳ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ‌ ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಬೇಕೆನ್ನುವುದು ನಮ್ಮ ಆಗ್ರಹ. ಮಹಾರಾಷ್ಟ್ರ ಸರ್ಕಾರ 2004ರಿಂದಲೂ ಎರಡೂ ರಾಜ್ಯಗಳ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್​​ನಲ್ಲಿ ದಾವೆ ಹೂಡಿದೆ. ಇದುವರೆಗೂ ಅದು ಯಶಸ್ವಿಯಾಗಿಲ್ಲ, ಮುಂದೆಯೂ ಆಗುವುದಿಲ್ಲ. ನಾವು ನಮ್ಮ ಕಾನೂನು ಹೋರಾಟವನ್ನು ಪ್ರಬಲವಾಗಿ ಮಾಡಲು ಸನ್ನದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ:ಗಡಿ ವಿವಾದ ಮಾತುಕತೆ ಮೂಲಕ ಬಗೆಹರಿಯಲಿ: ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ

Last Updated : Nov 25, 2022, 9:35 AM IST

ABOUT THE AUTHOR

...view details