ಕರ್ನಾಟಕ

karnataka

By

Published : May 5, 2021, 10:38 AM IST

ETV Bharat / bharat

ಇಂದು ಮರಾಠ ಮೀಸಲಾತಿ ಕುರಿತು ತೀರ್ಪು ನೀಡಲಿರುವ ಸುಪ್ರೀಂಕೋರ್ಟ್​

ಮಹಾರಾಷ್ಟ್ರದ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದ ವರ್ಗಗಳ (ಎಸ್‌ಬಿಸಿ) ಕಾಯ್ದೆ 2018 ರ ಅಡಿಯಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ 12 ರಿಂದ 13 ರಷ್ಟು ಮೀಸಲಾತಿಯನ್ನು ಎತ್ತಿಹಿಡಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹಲವರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

Maratha quota
ಇಂದು ಮರಾಠಾ ಕೋಟಾ ಕುರಿತು ತೀರ್ಪು ನೀಡಲಿರುವ ಸುಪ್ರೀಂ ಕೋರ್ಟ್​

ನವದೆಹಲಿ: ರಾಜ್ಯದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವುದನ್ನು ಎತ್ತಿಹಿಡಿದ ಬಾಂಬೆ ಹೈಕೋರ್ಟ್ ತೀರ್ಪು ಪ್ರಶ್ನಿಸಿರುವ ಅರ್ಜಿಗಳ ಕುರಿತು ಸುಪ್ರೀಂಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸಲಿದೆ.

ನ್ಯಾ.ಅಶೋಕ್ ಭೂಷಣ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಮಾರ್ಚ್ 26 ರಂದು ಕಾಯ್ದಿರಿಸಿದ್ದ ತೀರ್ಪನ್ನು ಇಂದು ಪ್ರಕಟಿಸಲಿದೆ. ಸಂವಿಧಾನ ಪೀಠವು ಮಾರ್ಚ್ 15 ರಂದು ಈ ವಿಷಯದ ವಿಚಾರಣೆಯನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿರಿ:ಶೇ 50 ಮೀಸಲಾತಿ ತೀರ್ಪು ಮರುಪರಿಶೀಲಿಸಲು ಸುಪ್ರೀಂ ಸಮ್ಮತಿ: ರಾಜ್ಯ ಸರ್ಕಾರಗಳಿಗೆ ನೋಟಿಸ್

1992 ರಲ್ಲಿ ಇಂದ್ರಾ ಸಹಾನಿ ನೇತೃತ್ವದ 9 ನ್ಯಾಯಾಧೀಶರ ಪೀಠವು ನೀಡಿದ್ದ ಶೇ.50 ರಷ್ಟು ಮೀಸಲಾತಿ ತೀರ್ಪನ್ನು ಮರುಪರಿಶೀಲಿಸುವ ಅಗತ್ಯವಿದೆ. ಮರಾಠಾ ಮೀಸಲಾತಿ ಪ್ರಕರಣವು ಕೇವಲ ಒಂದು ರಾಜ್ಯಕ್ಕೆ ಸಂಬಂಧಿಸಿದ್ದಲ್ಲ. ಇದರಲ್ಲಿ ದೇಶದ ಎಲ್ಲಾ ರಾಜ್ಯಗಳ ಅಭಿಪ್ರಾಯ ಬೇಕಿದೆ ಎಂದು ಈ ಹಿಂದೆ ಸುಪ್ರೀಂ ಕೋರ್ಟ್​ ಹೇಳಿತ್ತು.

ಇದನ್ನೂ ಓದಿರಿ:ವಿಶ್ಲೇಷಣೆ; ಮೀಸಲಾತಿ ಕಾಯ್ದೆಗಳ ಪುನರ್​ ಪರಿಶೀಲನೆಗೆ ಮುಂದಾದ ಸುಪ್ರೀಂ ಕೋರ್ಟ್​

ಮಹಾರಾಷ್ಟ್ರದ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದ ವರ್ಗಗಳ (ಎಸ್‌ಬಿಸಿ) ಕಾಯ್ದೆ 2018 ರ ಅಡಿಯಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠರಿಗೆ 12 ರಿಂದ 13 ರಷ್ಟು ಮೀಸಲಾತಿಯನ್ನು ಎತ್ತಿಹಿಡಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹಲವರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ABOUT THE AUTHOR

...view details