ನವದೆಹಲಿ:ದೇಶದ ಎಲ್ಲ ಮಹಿಳೆಯರಿಗೆ ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತ ಮಾಡುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಿವಾಹಿತ ಮತ್ತು ಅವಿವಾಹಿತ ಮಹಿಳೆಯರ ನಡುವಿನ ಗರ್ಭಪಾತದ ಹಕ್ಕನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಭಾರತದಲ್ಲಿ ಅವಿವಾಹಿತ ಮಹಿಳೆಯರಿಗೂ ಎಂಟಿಪಿ ಕಾಯ್ದೆಯಡಿ ಗರ್ಭಪಾತ ಮಾಡುವ ಹಕ್ಕಿದೆ. ಭಾರತದ ಎಲ್ಲಾ ಮಹಿಳೆಯರಿಗೆ ಆಯ್ಕೆ ಮಾಡುವ ಹಕ್ಕಿದೆ. ಅಷ್ಟೇ ಅಲ್ಲ, ಗರ್ಭಪಾತದ ಉದ್ದೇಶಗಳಿಗಾಗಿ ವೈದ್ಯಕೀಯ ಗರ್ಭಪಾತ ಕಾಯ್ದೆ ಮತ್ತು ನಿಯಮಗಳ ಅಡಿಯಲ್ಲಿ ವೈವಾಹಿಕ ಅತ್ಯಾಚಾರವನ್ನು ಸಹ ಅಪರಾಧವೆಂದು ಪರಿಗಣಿಸಲಾಗುವುದು ಅಂತಾ ಸುಪ್ರೀಂ ಕೋರ್ಟ್ ಹೇಳಿದೆ.
ಸುಪ್ರೀಂ ಕೋರ್ಟ್‌ನ ಈ ತೀರ್ಪಿನ ಅರ್ಥವೇನೆಂದರೆ ಈಗ ಅವಿವಾಹಿತ ಮಹಿಳೆಯರೂ 24 ವಾರಗಳವರೆಗೆ ಗರ್ಭಪಾತ ಮಾಡುವ ಹಕ್ಕನ್ನು ಪಡೆದಿದ್ದಾರೆ. ಸಾಮಾನ್ಯ ಸಂದರ್ಭಗಳಲ್ಲಿ 20 ವಾರಗಳಿಗಿಂತ ಹೆಚ್ಚು ಮತ್ತು 24 ವಾರಗಳಿಗಿಂತ ಕಡಿಮೆ ಅವಧಿಯ ಗರ್ಭಪಾತದ ಹಕ್ಕು ಇದುವರೆಗೆ ವಿವಾಹಿತ ಮಹಿಳೆಯರಿಗೆ ಮಾತ್ರ ಇತ್ತು. ಭಾರತದಲ್ಲಿ ಗರ್ಭಪಾತ ಕಾನೂನಿನ ಅಡಿಯಲ್ಲಿ ವಿವಾಹಿತ ಮತ್ತು ಅವಿವಾಹಿತ ಮಹಿಳೆಯರ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಸುಪ್ರೀಂ ತಿಳಿಸಿದೆ.