ತಿರುವನಂತಪುರಂ(ಕೇರಳ):1954ರ ವಿಶೇಷ ವಿವಾಹ ಕಾಯ್ದೆ ಅಡಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮದುವೆ ನೋಂದಾಯಿಸಿಕೊಳ್ಳಲು ಕೇರಳ ಹೈಕೋರ್ಟ್ ಅವಕಾಶ ನೀಡಿದೆ. ನ್ಯಾಯಮೂರ್ತಿಗಳಾದ ಎ. ಮುಹಮ್ಮದ್ ಮುಸ್ತಾಕ್ ಹಾಗೂ ಕೌಸರ್ ಎಡಪ್ಪಗತ್ ಅವರ ವಿಭಾಗೀಯ ಪೀಠ ಇದರ ವಿಚಾರಣೆ ನಡೆಸಿ ಈ ತೀರ್ಪು ನೀಡಿದ್ದು, ನಾಳೆ ಕೂಡ ಇದರ ವಿಚಾರಣೆ ನಡೆಯಲಿದೆ.
ತಂತ್ರಜ್ಞಾನದ ಯುಗದಲ್ಲಿ ಎಸ್ಎಮ್ಎ(SMA) ಅಡಿಯಲ್ಲಿ ವಿವಾಹ ನೋಂದಣಿ ಮಾಡಿಸಿಕೊಳ್ಳಲು ನಮಗೆ ಯಾವುದೇ ರೀತಿಯ ಕಷ್ಟವಿಲ್ಲ. ಆನ್ಲೈನ್ ಮೂಲಕ ಈ ಕೆಲಸ ಮಾಡಬಹುದಾಗಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ದೇಶದಲ್ಲಿ ಪ್ರತಿಯೊಂದು ಮದುವೆ ಕಡ್ಡಾಯವಾಗಿ ನೋಂದಣಿಯಾಗಬೇಕು. ತಾಂತ್ರಿಕ ಯುಗದಲ್ಲಿ ಇದು ಸಾಧ್ಯ ಎಂದು ವಿಭಾಗೀಯ ಪೀಠ ತಿಳಿಸಿದೆ.