ನವ ದೆಹಲಿ:ಓಯೋ ಹೋಟೆಲ್ ಕೊಠಡಿಗೆ ತೆರಳಿದ್ದ ಓರ್ವ ಪುರುಷ ಮತ್ತು ಮಹಿಳೆ ಯಾವುದೋ ವಿಷಯಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಈ ಗಲಾಟೆ ವಿಕೋಪಕ್ಕೆ ತೆರಳಿ 38 ವರ್ಷದ ವಿವಾಹಿತ ವ್ಯಕ್ತಿ ತನ್ನ ಗೆಳತಿಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ನರೇಲಾ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು ಗೀತಾ (39) ಎಂದು ಗುರುತಿಸಲಾಗಿದೆ. ಪ್ರವೀಣ್ ಅಲಿಯಾಸ್ ಸಿತು ಆರೋಪಿಯಾಗಿದ್ದಾನೆ. ಮಂಗಳವಾರ ತನ್ನ ಗೆಳತಿಗೆ ಗುಂಡಿಕ್ಕಿದ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಆತನನ್ನು ಹೋಟೆಲ್ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರವೀಣನ ಪತ್ನಿ ಮತ್ತು ಇಬ್ಬರು ಮಕ್ಕಳು ದೆಹಲಿ ಸಮೀಪದ ಹಳ್ಳಿಯೊಂದರಲ್ಲಿ ನೆಲೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.