ಕರ್ನಾಟಕ

karnataka

ETV Bharat / bharat

ವರದಕ್ಷಿಣೆ ನೀಡುವಂತೆ ಒತ್ತಾಯಿಸಿ ಪತ್ನಿಯನ್ನೇ ಕೊಂದ ಪತಿ! - ವರದಕ್ಷಿಣೆಗೋಸ್ಕರ ಪತ್ನಿ ಕೊಲೆ

ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಎಸ್​​ಐ ಅನುಪ್ರಿಯಾ, ವರದಕ್ಷಿಣೆಗೋಸ್ಕರ ಪ್ರಿಯಾಂಕಾಗೆ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರು ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದಿದ್ದಾರೆ..

MARRIED WOMAN MURDERED FOR DOWRY IN PATNA
MARRIED WOMAN MURDERED FOR DOWRY IN PATNA

By

Published : Apr 9, 2022, 3:07 PM IST

ಪಾಟ್ನಾ(ಬಿಹಾರ):ವರದಕ್ಷಿಣೆ ಕಿರುಕುಳಕ್ಕೆ ವಿವಾಹಿತ ಮಹಿಳೆಯೋರ್ವಳು ಬಲಿಯಾಗಿರುವ ಘಟನೆ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದಿದೆ. ಪತ್ನಿಯ ಕೊಲೆಯ ಬೆನ್ನಲ್ಲೇ ಗಂಡನ ಮನೆಯವರು ತಲೆಮರೆಸಿಕೊಂಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪಾಟ್ನಾದ ಫುಲ್ವಾರಿ ಶರೀಫ್ ಪೊಲೀಸ್ ಠಾಣಾ ವ್ಯಾಪ್ತಿಯ ಆಲಂಪುರ ಗೋನ್​ಪುರದಲ್ಲಿ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನ ಪ್ರಿಯಾಂಕಾ ಕುಮಾರ್​(25) ಎಂದು ಗುರುತಿಸಲಾಗಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿದ್ದಾಗಿ ತಿಳಿದು ಬಂದಿದೆ. ವರದಕ್ಷಿಣೆಗೋಸ್ಕರ ಗಂಡನ ಮನೆಯವರು ಕೊಲೆ ಮಾಡಿದ್ದಾರೆಂದು ಮೃತಳ ಸಂಬಂಧಿಕರು ಗಂಭೀರ ಆರೋಪ ಮಾಡಿದ್ದಾರೆ.

ಪ್ರಿಯಾಂಕಾಗೆ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿತ್ತು. ಮದುವೆ ನಂತರ ಪತಿ ನಿರಂಜನ್ ಕುಮಾರ್ ಹಾಗೂ ಕುಟುಂಬಸ್ಥರು ದೊಡ್ಡ ಮೊತ್ತದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಹಣ ನೀಡದ ಕಾರಣ ಕಳೆದ ಗುರುವಾರ ತಡರಾತ್ರಿ ಪ್ರಿಯಾಂಕಾ ಕುಮಾರಿಯನ್ನ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಎಲ್ಲರೂ ತಲೆ ಮರೆಸಿಕೊಂಡಿದ್ದಾರೆ. ಮೃತದೇಹವನ್ನ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿ, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಫುಲ್ವಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಇಮ್ರಾನ್​​ಖಾನ್​ಗೆ ಭಾರತ ಇಷ್ಟವಿದ್ದರೆ, ಪಾಕ್ ತೊರೆಯಲಿ: ಮರ್ಯಮ್ ಖಾನ್

ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಎಸ್​​ಐ ಅನುಪ್ರಿಯಾ, ವರದಕ್ಷಿಣೆಗೋಸ್ಕರ ಪ್ರಿಯಾಂಕಾಗೆ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರು ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದಿದ್ದಾರೆ.

ABOUT THE AUTHOR

...view details