ನವದೆಹಲಿ:ಕೊರೊನಾವೈರಸ್ ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ದೆಹಲಿಯ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ. ಮಾಸ್ಕ್ ಆದೇಶ ಉಲ್ಲಂಘಿಸಿದರೆ 500 ರೂಪಾಯಿ ದಂಡ ವಿಧಿಸಲಾಗುತ್ತದೆ. ಆದರೆ ಖಾಸಗಿ ಕಾರಿನಲ್ಲಿ ಪ್ರಯಾಣಿಸುವಾಗ ಮಾತ್ರ ಈ ನಿಯಮ ಅನ್ವಯಿಸುವುದಿಲ್ಲ.
ಕೊರೊನಾ ಹೆಚ್ಚಳ: ದೆಹಲಿಯಲ್ಲಿ ಮಾಸ್ಕ್ ಕಡ್ಡಾಯ
ದೇಶದ ರಾಜಧಾನಿ ದೆಹಲಿಯಲ್ಲಿ ಕೊರೊನಾ ಹೆಚ್ಚಳ. ವೈರಸ್ ಹರಡದಂತೆ ತಡೆಗಟ್ಟಲು ಸರ್ಕಾರದ ಮಾರ್ಗಸೂಚಿ. ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಲು ಆದೇಶ.
Masks are mandatory in Delhi
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 2,146 ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಮಂಗಳವಾರ 2,495 ಪ್ರಕರಣಗಳು ಪತ್ತೆಯಾಗಿದ್ದವು. ಕೊರೊನಾ ವೈರಸ್‌ನಿಂದ ಎಂಟು ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಬುಲೆಟಿನ್ ತಿಳಿಸಿದೆ. ನಗರದಲ್ಲಿ ಕೋವಿಡ್ ಪಾಸಿಟಿವಿಟಿ ದರವು 17.83 ಪ್ರತಿಶತಕ್ಕೆ ಏರಿದೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 8,205 ರಷ್ಟಿದೆ. ಈ ಪೈಕಿ 5,549 ರೋಗಿಗಳು ಮನೆಯಲ್ಲಿ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.