ಅಮೃತಸರ್(ಪಂಜಾಬ್): ದೆಹಲಿಯ ವಾಣಿಜ್ಯ ಕಟ್ಟಡಕ್ಕೆ ಬೆಂಕಿ ತಗುಲಿ 27 ಮಂದಿ ಸಾವನ್ನಪ್ಪಿರುವ ಪ್ರಕರಣ ಮಾಸುವ ಮುನ್ನವೇ ಪಂಜಾಬ್ನ ಅಮೃತಸರ್ದಲ್ಲಿರುವ ಪ್ರಸಿದ್ಧ ಗುರು ನಾನಕ್ ದೇವ್ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ರೋಗಿಗಳನ್ನ ತಕ್ಷಣವೇ ಬೇರೆ ಕಡೆ ಸ್ಥಳಾಂತರ ಮಾಡಲಾಗಿದೆ.
ಅಮೃತಸರ್ ಗುರು ನಾನಕ್ ದೇವ್ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ದುರಂತ
ಪಂಜಾಬ್ನ ಗುರು ನಾನಕ್ ದೇವ್ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ಸಾವು-ನೋವಿನ ಬಗ್ಗೆ ಯಾವುದೇ ರೀತಿಯ ಮಾಹಿತಿ ಲಭ್ಯವಾಗಿಲ್ಲ.
Massive fire breaks out at Guru Nanak Dev Hospital
ಘಟನಾ ಸ್ಥಳಕ್ಕೆ ಈಗಾಗಲೇ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಮಗ್ನವಾಗಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಯಾವುದೇ ಸಾವು-ನೋವಿನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತದ ಮಾತನಾಡಿರುವ ಪಂಜಾಬ್ ಸಚಿವ ಹರ್ಭಜನ್ ಸಿಂಗ್, ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಎಂದಿದ್ದಾರೆ.
Last Updated : May 14, 2022, 4:08 PM IST