ಕರ್ನಾಟಕ

karnataka

ETV Bharat / bharat

ಪೊಲೀಸ್ ಠಾಣೆಯಲ್ಲಿ ಭಾರಿ ಅಗ್ನಿ ಅವಘಡ : ಹಲವು ವಾಹನಗಳು ಭಸ್ಮ - ಜಮ್ಮುವಿನ ಸತ್ವಾರಿ ಪೊಲೀಸ್ ಠಾಣೆಯಲ್ಲಿ ಮುಂಜಾನೆ ಭಾರಿ ಬೆಂಕಿ ಕಾಣಿಸಿಕೊಂಡಿದೆ

ಬೆಂಕಿ ಹೊತ್ತಿಕೊಂಡ ಕೂಡಲೇ ಅಗ್ನಿಶಾಮಕ ದಳದವರು ಠಾಣೆಗೆ ಧಾವಿಸಿ, ಬೆಂಕಿಯನ್ನು ಹತೋಟಿಗೆ ತರಲು ಸುಮಾರು ಒಂದು ಗಂಟೆ ಬೇಕಾಯಿತು. ಆದರೆ, ಆ ವೇಳೆಗಾಗಲೇ ವಶಪಡಿಸಿಕೊಂಡ ವಾಹನಗಳು ಸೇರಿದಂತೆ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳು ಸುಟ್ಟು ಭಸ್ಮವಾಗಿವೆ.

ಪೊಲೀಸ್ ಠಾಣೆಯಲ್ಲಿ ಭಾರೀ ಅಗ್ನಿ ಅವಘಡ
ಪೊಲೀಸ್ ಠಾಣೆಯಲ್ಲಿ ಭಾರೀ ಅಗ್ನಿ ಅವಘಡ

By

Published : Jun 5, 2022, 7:57 PM IST

ಶ್ರೀನಗರ: ಜಮ್ಮುವಿನ ಸತ್ವಾರಿ ಪೊಲೀಸ್ ಠಾಣೆಯಲ್ಲಿ ಭಾನುವಾರ ಮುಂಜಾನೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿದ್ದ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬೆಂಕಿ ಹೊತ್ತಿಕೊಂಡ ಕೂಡಲೇ ಅಗ್ನಿಶಾಮಕ ದಳದವರು ಠಾಣೆಗೆ ಧಾವಿಸಿ, ಬೆಂಕಿಯನ್ನು ಹತೋಟಿಗೆ ತರಲು ಸುಮಾರು ಒಂದು ಗಂಟೆ ಬೇಕಾಯಿತು. ಆದರೆ, ಆ ವೇಳೆಗಾಗಲೇ ವಶಪಡಿಸಿಕೊಂಡ ವಾಹನಗಳು ಸೇರಿದಂತೆ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳೆಲ್ಲವೂ ಸುಟ್ಟು ಭಸ್ಮವಾಗಿವೆ.

ಸತ್ವಾರಿ ಪೊಲೀಸ್ ಠಾಣೆಯ ಹೊರಗಿನ ತೆರೆದ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗ್ತಿದೆ.

ಇದನ್ನೂ ಓದಿ:ಜನ್ಮದಿನ ಆಚರಿಸಿ ಬರುವಾಗ ಜವರಾಯನ ಅಟ್ಟಹಾಸ: ಹೊತ್ತಿ ಉರಿದ ಬಸ್​,7 ಜನ ಸಜೀವ ದಹನ‌; ಮೋದಿ ಸಂತಾಪ

ABOUT THE AUTHOR

...view details