ಪಾಲ್ಘರ್: ರಾಸಾಯನಿಕ ಟ್ಯಾಂಕರ್ವೊಂದರಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ನಲ್ಲಿ ನಡೆದಿದೆ.
ಬೋಯಿಸರ್-ತಾರಾಪುರ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮ (ಎಂಐಡಿಸಿ) ಪ್ರದೇಶದ ಸಿನಯ್ ಕಂಪನಿ ಹೊರಗೆ ಇರಿಸಲಾಗಿದ್ದ ಟ್ಯಾಂಕರ್ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆಯೇ ಅಗ್ನಿಜ್ವಾಲೆ ವ್ಯಾಪಿಸಿದ್ದು, ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಹತೋಟಿಗೆ ತಂದಿದ್ದಾರೆ ಎಂದು ತಿಳಿದುಬಂದಿದೆ.