ಸಹರಾನ್‌ಪುರ(ಉತ್ತರ ಪ್ರದೇಶ):ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನ ಬಾಲಕರ ಹಾಸ್ಟೆಲ್‌ನಲ್ಲಿ ಗುರುವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಹಾಸ್ಟೆಲ್‌ನ ಕೊಠಡಿ ಸಂಖ್ಯೆ 9ರಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ವಿದ್ಯಾರ್ಥಿಗಳ ಪುಸ್ತಕ ಸೇರಿದಂತೆ ಇತರ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿವೆ.
ಬಾಲಕರ ಹಾಸ್ಟೆಲ್‌ನಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ಅನಾಹುತ - ಅಗ್ನಿ ಅವಘಡ
ಸಹರಾನ್‌ಪುರ ವೈದ್ಯಕೀಯ ಕಾಲೇಜಿನ ಬಾಲಕರ ಹಾಸ್ಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಬಾಲಕರ ಹಾಸ್ಟೆಲ್‌ನಲ್ಲಿ ಅಗ್ನಿ ಅವಘಡ
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸಪಟ್ಟು ಬೆಂಕಿ ಹತೋಟಿಗೆ ತಂದಿದ್ದಾರೆ. ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳು ಸಕಾಲದಲ್ಲಿ ಕೊಠಡಿಯಿಂದ ಹೊರ ಬಂದಿದ್ದರಿಂದ ಭಾರಿ ಅನಾಹುತ ತಪ್ಪಿದೆ.
ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಕಣಿವೆ ನಾಡಿನಲ್ಲಿ ಗುಂಡಿನ ಮೊರೆತ: ಎರಡು ಕಡೆಗಳಲ್ಲಿ ಎನ್ಕೌಂಟರ್ ಶುರು