ಜಬಲ್ಪುರ್(ಮಧ್ಯಪ್ರದೇಶ): ಮಧ್ಯಪ್ರದೇಶದ ಜಬಲ್ಪುರದಲ್ಲಿರುವ ನ್ಯೂ ಲೈಫ್ ಮಲ್ಟಿ ಸ್ಪೆಷಾಲಿಟಿ ಖಾಸಗಿ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಅನೇಕರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಈಗಾಗಲೇ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಕಿ ದಿಢೀರ್ ಎಲ್ಲೆಡೆ ಆವರಿಸಿರುವ ಕಾರಣ ಆಸ್ಪತ್ರೆಯಲ್ಲಿದ್ದ ಜನರು, ಸಿಬ್ಬಂದಿ ಹೊರಗಡೆ ಬರಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗ್ತಿದೆ. ದುರ್ಘಟನೆಯ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಎಷ್ಟು ರೋಗಿಗಳಿದ್ದರು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಆದರೆ, 52 ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದರು ಎಂಬ ಮಾಹಿತಿ ದೊರೆತಿದೆ.