ಕರ್ನಾಟಕ

karnataka

ETV Bharat / bharat

ಕೃಷ್ಣ ಜನ್ಮಭೂಮಿ ವಿಚಾರ; ಇಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಲಿರುವ ಮಥುರಾ ಕೋರ್ಟ್​​

ಶ್ರೀ ಕೃಷ್ಣ ಜನ್ಮಭೂಮಿಗೆ ಸೇರಿದ 13.37 ಎಕರೆ ಭೂಮಿಯನ್ನು ಮರು ಪಡೆಯಲು ಸೆಪ್ಟೆಂಬರ್ 25 ರಂದು ಅರ್ಜಿ ಸಲ್ಲಿಸಲಾಗಿತ್ತು. ಆವರಣದಲ್ಲಿ ಅಕ್ರಮವಾಗಿ ನಿರ್ಮಿಸಲಾದ ರಾಯಲ್ ಈದ್ಗಾ ಮಸೀದಿಯನ್ನು ತೆಗೆದುಹಾಕಬೇಕೆಂದು ಅರ್ಜಿದಾರರು ಒತ್ತಾಯಿಸಿದ್ದಾರೆ.

ಇಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಲಿರುವ ಮಥುರಾ ನ್ಯಾಯಾಲಯ
ಇಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಲಿರುವ ಮಥುರಾ ನ್ಯಾಯಾಲಯ

By

Published : Jan 18, 2021, 12:18 PM IST

ಮಥುರಾ (ಯುಪಿ): ದೇವಾಲಯದ ಬಳಿಯಿರುವ ಮಸೀದಿಯನ್ನು ತೆಗೆಯಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಮಥುರಾ ಜಿಲ್ಲಾ ನ್ಯಾಯಾಲಯವು ವಿಚಾರಣೆ ನಡೆಸಲಿದೆ.

ವಿಚಾರಣೆಯನ್ನು ಜನವರಿ 15 ರಂದು ನಿಗದಿಪಡಿಸಲಾಗಿತ್ತು. ಆದರೆ, ಆ ದಿನ ಜಿಲ್ಲಾ ನ್ಯಾಯಾಧೀಶರು ಲಭ್ಯವಿಲ್ಲದ ಕಾರಣ ವಿಚಾರಣೆ ಮುಂದೂಡಲಾಯಿತು.

ಶ್ರೀ ಕೃಷ್ಣ ಜನ್ಮಸ್ಥಳದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯು ಬೆಳಗ್ಗೆ 11 ಗಂಟೆಯ ನಂತರ ನಡೆಯಲಿದೆ.

ಇದನ್ನೂ ಓದಿ: ಟ್ರ್ಯಾಕ್ಟರ್​ ಪರೇಡ್ ತಡೆಗೆ ಯಾವುದೇ ಆದೇಶ ನೀಡಲು ಸುಪ್ರೀಂ ನಕಾರ: ಅರ್ಜಿ ವಿಚಾರಣೆ ಮುಂದೂಡಿಕೆ

ಶ್ರೀ ಕೃಷ್ಣ ಜನ್ಮಭೂಮಿಗೆ ಸೇರಿದ 13.37 ಎಕರೆ ಭೂಮಿಯನ್ನು ಮರುಪಡೆಯಲು ಸೆಪ್ಟೆಂಬರ್ 25 ರಂದು ಅರ್ಜಿ ಸಲ್ಲಿಸಲಾಗಿತ್ತು. ಆವರಣದಲ್ಲಿ ಅಕ್ರಮವಾಗಿ ನಿರ್ಮಿಸಲಾದ ರಾಯಲ್ ಈದ್ಗಾ ಮಸೀದಿಯನ್ನು ತೆಗೆದುಹಾಕಬೇಕು ಎಂದು ಅರ್ಜಿದಾರರು ಒತ್ತಾಯಿಸಿದ್ದಾರೆ.

ಸೆಪ್ಟೆಂಬರ್ 25 ರಂದು, ಶ್ರೀ ಕೃಷ್ಣನ ಜನ್ಮಸ್ಥಳದ ಮಾಲೀಕತ್ವದ ಬಗ್ಗೆ ಸುಪ್ರೀಂಕೋರ್ಟ್ ವಕೀಲರಾದ ಹರಿಶಂಕರ್ ಜೈನ್, ವಿಷ್ಣು ಶಂಕರ್ ಜೈನ್ ಮತ್ತು ರಂಜನಾ ಅಗ್ನಿಹೋತ್ರಿ ಸೇರಿದಂತೆ ಐದು ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ABOUT THE AUTHOR

...view details