ಕರ್ನಾಟಕ

karnataka

ETV Bharat / bharat

ಡಿವೈಡರ್​​​​​ಗೆ ಡಿಕ್ಕಿ ಹೊಡೆದು ಪಲ್ಟಿ ಆದ ಬಸ್​.. ಮೂವರು ಪ್ರಯಾಣಿಕರ ದುರ್ಮರಣ

ಭಾನುವಾರ ತಡರಾತ್ರಿ ಮಥುರಾದಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಇಲ್ಲಿನ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಬಸ್ ಪಲ್ಟಿಯಾಗಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. 22 ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ.

ಡಿವೈಡರ್​​​​​ಗೆ ಡಿಕ್ಕಿ ಹೊಡೆದು ಪಲ್ಟಿ ಆದ ಬಸ್​.. ಮೂವರು ಪ್ರಯಾಣಿಕರ ದುರ್ಮರಣ
ಡಿವೈಡರ್​​​​​ಗೆ ಡಿಕ್ಕಿ ಹೊಡೆದು ಪಲ್ಟಿ ಆದ ಬಸ್​.. ಮೂವರು ಪ್ರಯಾಣಿಕರ ದುರ್ಮರಣ

By

Published : Feb 27, 2023, 7:22 AM IST

ಮಥುರಾ( ಉತ್ತರಪ್ರದೇಶ): ಮಥುರಾ ಜಿಲ್ಲೆಯ ಸುರಿರ್ ಪೊಲೀಸ್ ಠಾಣಾ ವ್ಯಾಪ್ತಿಯ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ತಡರಾತ್ರಿ ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಬಸ್ ಅತಿವೇಗದಲ್ಲಿದ್ದ ಕಾರಣ ಡಿವೈಡರ್​​ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ. ಈ ಅವಘಡದಲ್ಲಿ 3 ಮಂದಿ ಸಾವನ್ನಪ್ಪಿದ್ದರೆ, ಬಸ್ ನಲ್ಲಿದ್ದ 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಪ್ರದೇಶ ಪೊಲೀಸರು ಮತ್ತು ಯಮುನಾ ಎಕ್ಸ್‌ಪ್ರೆಸ್ ವೇ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರು. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೂ ರವಾನಿಸಲಾಗಿದೆ.

ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಮಥುರಾ ಜಿಲ್ಲಾಧಿಕಾರಿ ಪುಲ್ಕಿತ್ ಖರೆ ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನು ಆಗ್ರಾ ಎಸ್‌ಎನ್ ವೈದ್ಯಕೀಯ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡ ಹತ್ತು ವರ್ಷದ ಅರುಣ್, 25 ವರ್ಷದ ಶಿವಾಜಿರಾವ್, 21 ವರ್ಷದ ವೀರೇಂದ್ರ ರಾಮ್, 55 ವರ್ಷದ ಲೀಲಾವತಿ, ರಾಮ್ ಚಂದ್ರ, ಆದಿತ್ಯ ಕುಮಾರ್ (6 ವರ್ಷ) ಅವರನ್ನು ಆಗ್ರಾಕ್ಕೆ ರವಾನಿಸಲಾಗಿದೆ. ಕೆಲ ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಇನ್ನೂ ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಥುರಾ ರಸ್ತೆ ಅಪಘಾತ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮಾಹಿತಿ ನೀಡಿರುವ ಅಲ್ಲಿನ ಪೊಲೀಸರು, ಬಸ್ ಚಾಲಕ ಮದ್ಯದ ಅಮಲಿನಲ್ಲಿದ್ದ ಕಾರಣ ವಾಹನ ತನ್ನ ನಿಯಂತ್ರಣ ತಪ್ಪಿ ಯಮುನಾ ಎಕ್ಸ್‌ಪ್ರೆಸ್‌ವೇ ನಲ್ಲಿರುವ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಬಸ್​ ಅತಿ ವೇಗದಲ್ಲಿದ್ದ ಕಾರಣ, ಡಿಕ್ಕಿಯಾದ ತಕ್ಷಣವೇ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಗಾಯಾಳುಗಳ ಸ್ಥಿತಿ ನೋಡಿದರೆ ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಯಮುನಾ ಎಕ್ಸ್ ಪ್ರೆಸ್ ವೇ ಮೂಲಕ ಬಸ್ ಬಿಹಾರದ ಕಡೆ ಸಂಚರಿಸುತ್ತಿತ್ತು ಎಂದು ಸಿಎಂಒ ಕಚೇರಿಯ ವೈದ್ಯ ಭೂದೇವ್ ಸಿಂಗ್ ಮಾಹಿತಿ ನೀಡಿದ್ದಾರೆ.

ಮಥುರಾದಲ್ಲಿ ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ನಡೆದ ರಸ್ತೆ ಅಪಘಾತದ ಬಗ್ಗೆ ಬದುಕುಳಿದಿರುವ ಪ್ರಯಾಣಿಕರು ಮಾತನಾಡಿದ್ದು, ಚಾಲಕ ಕುಡಿದು ಅತಿವೇಗವಾಗಿ ಬಸ್ ಚಲಾಯಿಸಿದ್ದರಿಂದ ಬಸ್ ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 2 ರಿಂದ 3 ಜನರು ಸಾವನ್ನಪ್ಪಿದ್ದಾರೆ ಎಂದು ಘಟನೆಯ ಪ್ರತ್ಯಕ್ಷ ಮಾಹಿತಿ ನೀಡಿದ್ದಾರೆ. ಗಾಯಾಳುಗಳು ಜಿಲ್ಲಾಸ್ಪತ್ರೆಗೆ ಬಂದಿದ್ದು, ಅವರ ಸಂಖ್ಯೆ 20 ರಿಂದ 22, ಎಲ್ಲರ ಸ್ಥಿತಿ ಚಿಂತಾಜನಕವಾಗಿದೆ. ಕೆಲವರನ್ನು ಆಗ್ರಾಕ್ಕೆ ಶಿಫಾರಸು ಮಾಡಲಾಗುತ್ತಿದೆ ಎಂದು ಅಲ್ಲಿನ ವೈದ್ಯರು ಮಾಹಿತಿ ನೀಡಿದ್ದಾರೆ.

ವಾಹನಕ್ಕೆ ಬಸ್ ಡಿಕ್ಕಿಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಆದರೆ ಅಪಘಾತದಲ್ಲಿ ಗಾಯಗೊಂಡವರ ಸ್ಥಿತಿ ತುಂಬಾ ಗಂಭೀರವಾಗಿದೆ. ಗಾಯಾಳುಗಳನ್ನು ಆಗ್ರಾದ ಎಸ್‌ಎನ್ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ ಎಂದು ಇದೇ ವೇಳೆ ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ:ಬ್ಯಾಟರಿ ಸಮಸ್ಯೆ: ಎರಡು ಸ್ಲೀಪರ್​ ಬಸ್​​ಗಳು ಬೆಂಕಿಯಿಂದ ಸುಟ್ಟು ಕರಕಲು

ABOUT THE AUTHOR

...view details