ನವದೆಹಲಿ :ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಗೆದ್ದು ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಎರಡನೇ ಅವಧಿಗೆ ಬಿಜೆಪಿ ಸರ್ಕಾರ ರಚನೆ ಮಾಡಿದೆ. ಇದರ ಮಧ್ಯೆ ಕಾಂಗ್ರೆಸ್ ಹಿರಿಯ ಮುಖಂಡ ರಾಹುಲ್ ಗಾಂಧಿ ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯಲ್ಲಿ ಆಯೋಜನೆಗೊಂಡಿದ್ದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮಾಯಾವತಿ ಅವರು ಉತ್ತರ ಪ್ರದೇಶ ಚುನಾವಣೆಯಲ್ಲಿ ಹೋರಾಡಲಿಲ್ಲ. ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವಂತೆ ನಾವು ಕೇಳಿಕೊಂಡಿದ್ದೇವು. ಆದರೆ, ನಮ್ಮ ಪ್ರಸ್ತಾಪಕ್ಕೆ ಅವರು ಸ್ಪಂದಿಸಲಿಲ್ಲ ಎಂದು ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ ದಲಿತರ ಉದ್ಧಾರಕ್ಕಾಗಿ ಕಾನ್ಸಿರಾಮ್ ಜಿ ಧ್ವನಿ ಎತ್ತಿದ್ದರು. ಅದು ಕಾಂಗ್ರೆಸ್ ಮೇಲೆ ಪರಿಣಾಮ ಬೀರಿತು. ಮಾಯಾವತಿಯವರು ದಲಿತರ ಪರವಾಗಿ ಧ್ವನಿ ಎತ್ತಲಿಲ್ಲ. ಅವರಿಗೆ ಸಿಬಿಐ, ಇಡಿ ಭಯದಲ್ಲಿದ್ದಾರೆಂದು ವಾಗ್ದಾಳಿ ನಡೆಸಿದರು.