ಕರ್ನಾಟಕ

karnataka

ETV Bharat / bharat

ಮಾಲಿನ್ಯ ನಿಯಂತ್ರಣಕ್ಕೆ ರೈತರ ಮೇಲೆ ಕ್ರಮ: ಯೋಗಿ ಸರ್ಕಾರದ ವಿರುದ್ಧ ವಿಪಕ್ಷಗಳು ಕಿಡಿ - ಯುಪಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ರೈತರ ಮೇಲೆ ಕ್ರಮ

ಉತ್ತರಪ್ರದೇಶದಲ್ಲಿ ಕೃಷಿ ತ್ಯಾಜ್ಯ ಸುಡುವುದರಿಂದ ವಾಯುಮಾಲಿನ್ಯ ಹೆಚ್ಚಾಗಿದ್ದು, ಯೋಗಿ ಸರ್ಕಾರ ರೈತರ ವಿರುದ್ಧ ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ. ಹಾಗಾಗಿ ಯುಪಿ ಸರ್ಕಾರದ ವಿರುದ್ಧ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಕಿಡಿಕಾರಿದ್ದು, ಕೂಡಲೇ ಈ ಕಾನೂನು ಕ್ರಮಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.

ollution
ಯೋಗಿ ಸರ್ಕಾರದ ವಿರುದ್ಧ ವಿಪಕ್ಷಗಳು ಕಿಡಿ

By

Published : Nov 7, 2020, 4:52 PM IST

ಲಖನೌ: ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ರೈತರ ವಿರುದ್ಧ ಯುಪಿ ಸಿಎಂ ಆದಿತ್ಯನಾಥ್ ತೆಗೆದುಕೊಂಡಿರುವ ಕ್ರಮಕ್ಕೆ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರೈತರು ಕೃಷಿ ತ್ಯಾಜ್ಯ ಸುಡುವುದರಿಂದ ಮಾಲಿನ್ಯ ಉಂಟಾಗುತ್ತಿದೆ ಅಲ್ಲವೇ?, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಕೃಷಿ ತ್ಯಾಜ್ಯ ಸುಡುವುದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಿ. ಪರಿಸರದ ಬಗ್ಗೆ ಅವರಿಗೆ ಜಾಗೃತಿ ಮೂಡಿಸಿ ಎಂದು ಯೋಗಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಮಾಯಾವತಿ ಕಿಡಿಕಾರಿದ್ದಾರೆ.

ಇತ್ತೀಚೆಗೆ ಉತ್ತರಪ್ರದೇಶದಲ್ಲಿ ಹೆಚ್ಚಾಗುತ್ತಿರುವ ವಾಯುಮಾಲಿನ್ಯಕ್ಕೆ ಕೃಷಿ ತ್ಯಾಜ್ಯ ಸುಡುವುದೇ ಕಾರಣ ಎಂದು ತಿಳಿದು ಬಂದಿದೆ. ಅದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ, ಸಿಎಂ ಯೋಗಿ ಆದಿತ್ಯನಾಥ್ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಕೃಷಿ ತ್ಯಾಜ್ಯ ಸುಡುವ ರೈತರ ವಿರುದ್ಧ ಜಿಲ್ಲಾಧಿಕಾರಿಗಳು ಕಠಿಣ ಕ್ರಮ ಕೈಗೊಂಡು ಅಗತ್ಯ ಬಿದ್ದರೆ ಅವರನ್ನು ಜೈಲಿಗೆ ಕಳಿಸಬಹುದು ಎಂದು ಸರ್ಕಾರ ಆದೇಶಿಸಿದೆ. ಇದರಿಂದಾಗಿ ರಾಜ್ಯದ ಹಲವೆಡೆ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆಗಳು ನಡೆದಿವೆ.

ರೈತರ ಮೇಲೆ ಹೀಗೆಯೇ ದೌರ್ಜನ್ಯ ಮುಂದುವರಿದರೆ ಸರ್ಕಾರದ ವಿರುದ್ಧ ಬಿಎಸ್​ಪಿ ಆಂದೋಲನ ನಡೆಸಲಿದೆ ಎಂಬ ಎಚ್ಚರಿಕೆ ನೀಡಿದ್ದಾರೆ. ಯುಪಿ ಸರ್ಕಾರದ ನಡೆಗೆ ಸಮಾಜವಾದಿ ಪಕ್ಷ, ಕಾಂಗ್ರೆಸ್​ ಕೂಡ ವಿರೋಧ ವ್ಯಕ್ತಪಡಿಸಿವೆ.

ABOUT THE AUTHOR

...view details