ಕರ್ನಾಟಕ

karnataka

ETV Bharat / bharat

ಯುಪಿ ಸರ್ಕಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದೆಗೆಟ್ಟಿದೆ: ಮಾಯಾವತಿ ಗರಂ

ರೈತರು ಮತ್ತು ಸಾರ್ವಜನಿಕ ಹಿತಾಸಕ್ತಿಯ ಜೊತೆಗೆ ಪ್ರಮುಖ ವಿಷಯಗಳಾದ ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಪ್ರಮುಖ ಕರ್ತವ್ಯವಾಗಿದ್ದು, ಈ ಕುರಿತು ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Mayawati
ಮಾಯಾವತಿ

By

Published : Feb 17, 2021, 12:58 PM IST

ಲಖನೌ:ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕೊಲೆ ಮತ್ತು ದರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ, ಇಂತ ಘಟನೆಗಳ ವಿರುದ್ಧ ಸರ್ಕಾರ ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ಬಗ್ಗೆ ಗಮನ ಹರಿಸಬೇಕೆಂದು ಬಿಎಸ್​​​​ಪಿ ಅಧ್ಯಕ್ಷೆ ಮಾಯಾವತಿ ಒತ್ತಾಯಿಸಿದ್ದಾರೆ.

ರೈತರು ಮತ್ತು ಸಾರ್ವಜನಿಕ ಹಿತಾಸಕ್ತಿಯ ಜೊತೆಗೆ ಪ್ರಮುಖ ವಿಷಯಗಳಾದ ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಪ್ರಮುಖ ಕರ್ತವ್ಯವಾಗಿದ್ದು, ಈ ಕುರಿತು ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

ಓದಿ : ಕೊರೊನಾ ಬಗ್ಗೆ ಸರ್ಕಾರ ನಿರ್ಲಕ್ಷ್ಯ, ಅತಿಯಾದ ವಿಶ್ವಾಸ ಹೊಂದಿದೆ: ರಾಹುಲ್ ಗಾಂಧಿ ನೇರಾರೋಪ

"ವಿಧಾನಸಭೆ ಮತ್ತು ಪಂಚಾಯತ್ ಚುನಾವಣೆಗೆ ಮುಂಚಿತವಾಗಿ ನಾಯಕರು, ವಕೀಲರು ಮತ್ತು ವ್ಯಾಪಾರಿಗಳ ಹತ್ಯೆ ಪ್ರಾರಂಭವಾಗಿರುವುದು ಆತಂಕಕಾರಿ ವಿಷಯವಾಗಿದೆ" ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ. " ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸದಿರುವುದು ಮತ್ತು ಹಳೆಯ ಪೈಪೋಟಿಯ ಪ್ರಕರಣಗಳು ಎಂದು ಕರೆಯುವುದು ಬಹಳ ದುರದೃಷ್ಟಕರ ಮತ್ತು ಖಂಡನೀಯ. ಇದರ ಬಗ್ಗೆ ಸರ್ಕಾರ ಗಮನ ಹರಿಸಬೇಕು" ಎಂದು ಟ್ವೀಟ್​ ಮೂಲಕ ಆಗ್ರಹಿಸಿದ್ದಾರೆ.

ABOUT THE AUTHOR

...view details