ನವದೆಹಲಿ :ವೈದ್ಯಕೀಯ ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದಿರುವ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಇಲ್ಲಿನ ಮೌಲಾನಾ ಆಜಾದ್ ಮೆಡಿಕಲ್ ಕಾಲೇಜ್ನಲ್ಲಿ ವ್ಯಾಸಂಗ ಮಾಡ್ತಿದ್ದ 19 ವರ್ಷದ ದಿವ್ಯಾ ಆತ್ಮಹತ್ಯಗೆ ಶರಣಾಗಿದ್ದಾರೆ.
ಮೌಲಾನಾ ಆಜಾದ್ ಮೆಡಿಕಲ್ ಕಾಲೇಜ್ನಲ್ಲಿ ಪ್ರಥಮ ವರ್ಷದ ಮೆಡಿಕಲ್ ತರಗತಿಯಲ್ಲಿ ವ್ಯಾಸಂಗ ಮಾಡ್ತಿದ್ದ ದಿವ್ಯಾ, ಎರಡು ವಿಷಯಗಳಲ್ಲಿ ಫೇಲ್ ಆಗಿದ್ದಳು ಎಂದು ತಿಳಿದು ಬಂದಿದೆ.
ಇದನ್ನೂ ಓದಿರಿ:Happy New Year 2022 : ಭಾರತಕ್ಕಿಂತ ಮೊದಲು ಹೊಸ ವರ್ಷ ಬರಮಾಡಿಕೊಂಡ ದೇಶಗಳು!
ಕಾಲೇಜ್ನ ಮಹಿಳಾ ಹಾಸ್ಟೇಲ್ನಲ್ಲಿ ವಾಸವಾಗಿದ್ದ ವಿದ್ಯಾರ್ಥಿನಿ ಕಳೆದ ಕೆಲ ದಿನಗಳ ಹಿಂದೆ ನಡೆದ ವೈದ್ಯಕೀಯ ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಈ ನಿರ್ಧಾರ ಕೈಗೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಆಕೆಯ ಸಹಪಾಠಿಗಳು, ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಆಕೆ ಖಿನ್ನತೆಗೊಳಗಾಗಿದ್ದಳು. ತಂದೆ-ತಾಯಿಗೆ ಹೇಗೆ ಮುಖ ತೋರಿಸಲಿ ಎಂದು ನಮ್ಮ ಮುಂದೆ ಹೇಳಿದ್ದಳು ಎಂದಿದ್ದಾರೆ.
ಕೊಠಡಿಯಲ್ಲಿ ನಿನ್ನೆ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತದನಂತರ ಚಿಲಕ ಮುರಿದು ಒಳಗೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳದಲ್ಲಿ ಡೆತ್ನೋಟ್ ಸಹ ಪತ್ತೆಯಾಗಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.