ನವದೆಹಲಿ:ರಾಜ್ಯದಲ್ಲಿ ಆರಂಭವಾದ ಹಿಜಾಬ್ ವಿವಾದದ ವಿಚಾರವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ ವಿದೇಶಾಂಗ ಇಲಾಖೆ ಪ್ರತಿಕ್ರಿಯೆ ನೀಡಿದ್ದು, ಬೇರೆ ರಾಷ್ಟ್ರಗಳು ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡುವುದು ಸ್ವಾಗತಾರ್ಹವಲ್ಲ ಎಂದಿದೆ.
ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಗ್ಚಿ ಈ ಕುರಿತು ಟ್ವೀಟ್ ಮಾಡಿದ್ದು, ಕರ್ನಾಟಕದ ರಾಜ್ಯದ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿನ ಡ್ರೆಸ್ ಕೋಡ್‌ಗೆ ಸಂಬಂಧಿಸಿದ ವಿಚಾರ ಹೈಕೋರ್ಟ್ನಲ್ಲಿ ವಿಚಾರಣೆಯಲ್ಲಿದೆ ಎಂದು ಟ್ವೀಟ್ ಮಾಡಿದ್ದಾರೆ.