ನವದೆಹಲಿ:ಭಾರತೀಯ ಮೀನುಗಾರರತ್ತ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದ ಪಾಕ್ ವಿರುದ್ಧ ಕೇಂದ್ರ ಸರ್ಕಾರ ಆಕ್ರೋಶ ವ್ಯಕ್ತಪಡಿಸಿದೆ.
ಈ ಸಂಬಂಧ ದೆಹಲಿಯಲ್ಲಿರುವ ಪಾಕಿಸ್ತಾನದ ಹೈಕಮಿಷನ್‌ನ ಅಧಿಕಾರಿಯನ್ನು ಕರೆಸಿಕೊಂಡಿರುವ ವಿದೇಶಾಂಗ ಸಚಿವಾಲಯ ಘಟನೆಯನ್ನು ಖಂಡಿಸಿದೆ.

ಪಾಕಿಸ್ತಾನದ ಕಡಲ ಭದ್ರತಾ ಪಡೆ ಕಳೆದ ಶನಿವಾರ ಭಾರತೀಯ ಮೀನುಗಾರಿಕಾ ದೋಣಿ 'ಜಲ್ಪರಿ' ಮೇಲೆ ಗುಂಡಿನ ದಾಳಿ ನಡೆಸಿತ್ತು. ಪರಿಣಾಮ ಓರ್ವ ಭಾರತೀಯ ಮೀನುಗಾರ ಸಾವನ್ನಪ್ಪಿದರೆ, ಮತ್ತೋರ್ವ ಮೀನುಗಾರ ಗಂಭೀರವಾಗಿ ಗಾಯಗೊಂಡಿದ್ದನು.
ಈ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಹಾಗೂ ಅಪ್ರಚೋದಿತ ಗುಂಡಿನ ದಾಳಿ ನಡೆಸದಂತೆ ತನ್ನ ಪಡೆಗಳಿಗೆ ಸೂಚನೆ ನೀಡುವಂತೆ ಪಾಕ್ ಸರ್ಕಾರಕ್ಕೆ ಭಾರತ ತಿಳಿಸಿದೆ.