ಶ್ರೀನಗರ: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ. ಶ್ರೀನಗರದಲ್ಲಿರುವ ಅಧಿಕೃತ ನಿವಾಸದಲ್ಲಿ ಅವರಿಗೆ ಗೃಹ ಬಂಧನ ವಿಧಿಸಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ನನ್ನನ್ನು ಮತ್ತೊಮ್ಮೆ ಗೃಹ ಬಂಧನದಲ್ಲಿ ಇರಿಸಲಾಗಿದೆ. ಉಗ್ರರಿಂದ ಹತ್ಯೆಗೊಳಗಾದ ಕಾಶ್ಮೀರಿ ಪಂಡಿತ್ ಸುನೀಲ್ ಕುಮಾರ್ ಭಟ್ ಅವರ ಕುಟುಂಬವನ್ನು ನಾನು ಭೇಟಿಯಾಗಬಾರದು ಎಂಬ ಉದ್ದೇಶದಿಂದ ಕೇಂದ್ರ ಈ ರೀತಿ ಮಾಡಿದೆ' ಎಂದಿದ್ದಾರೆ.
'ಕೇಂದ್ರದ ಕೆಟ್ಟ ನೀತಿಗಳಿಂದ ಕಾಶ್ಮೀರಿ ಪಂಡಿತರ ಹತ್ಯೆಯಾಗುತ್ತಿದೆ. ಮುಖ್ಯವಾಹಿನಿಯಲ್ಲಿ ನಾವು ಕಾಶ್ಮೀರಿ ಪಂಡಿತರ ವಿರೋಧಿಗಳು ಎಂಬುದಾಗಿ ಬಿಂಬಿಸಲು ನನ್ನನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಕಾಶ್ಮೀರಿ ಪಂಡಿತರ ಸಂಕಷ್ಟಗಳನ್ನು ಮುಚ್ಚಿಡಲು ಕೇಂದ್ರ ಯತ್ನಿಸುತ್ತಿದೆ' ಎಂದು ಅವರು ಆರೋಪಿಸಿದ್ದಾರೆ.