ಮಹಾರಾಷ್ಟ್ರ/ಕೊಲ್ಹಾಪುರ: ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಶಿವಾಜಿ ಮಹಾರಾಜರಿಗೆ ಕಪ್ಪು ಮಸಿ ಸುರಿದ ಘಟನೆ ವಿರೋಧಿಸಿ ಕೊಲ್ಹಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡಿಗರ ಅಂಗಡಿಗಳನ್ನು ಉದ್ದೇಶ ಪೂರ್ವಕವಾಗಿ ಬಂದ್ ಮಾಡಿಸುವ ಜೊತೆಗೆ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಬೆಳಗಾವಿಯ ಸಂಭಾಜಿ ಮಹಾರಾಜ ಚೌಕದಲ್ಲಿ ಜಮಾಯಿಸಿದ ಕಾರ್ಯಕರ್ತರು:
ಬೆಂಗಳೂರಿನಲ್ಲಿ ಕಿಡಿಗೇಡಿಗಳು ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಬಳಿದಿರುವುದನ್ನು ವಿರೋಧಿಸಿ, ಶಿವಸೇನೆ ಕಾರ್ಯಕರ್ತರು ಬೆಳಗಾವಿಯ ಸಂಭಾಜಿ ಮಹಾರಾಜ ಚೌಕದಲ್ಲಿ ಜಮಾಯಿಸಿ, ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೂ ಮೊದಲು ಶಿವಾಜಿ ಪ್ರತಿಮೆಗೆ ಹಾಲಿನ ಅಭಿಷೇಕ ಮಾಡಿದರು. ಬಳಿಕ ಕನ್ನಡಿಗರ ಹೋಟೆಲ್, ಅಂಗಡಿಗಳನ್ನು ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರು ಬಂದ್ ಮಾಡಿಸಿದ್ದಾರೆ. ಈ ಕುರಿತಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.