ನಾಸಿಕ್(ಮಹಾರಾಷ್ಟ್ರ):ಕಾರು ಅಪಘಾತದಲ್ಲಿ ನಾಲ್ವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಮತ್ತು ಸಿನ್ನಾರ್ ಹೆದ್ದಾರಿಯ ಮಹೋದರಿ ಘಾಟ್ನಲ್ಲಿ ಶುಕ್ರವಾರ ನಡೆದಿದೆ. ಈ ವಿದ್ಯಾರ್ಥಿಗಳು ಮದುವೆ ಸಮಾರಂಭದಿಂದ ವಾಪಸ್ ಆಗುತ್ತಿದ್ದರು ಎಂದು ತಿಳಿದು ಬಂದಿದೆ.
ಟೈರ್ ಸ್ಫೋಟಿಸಿ ಮತ್ತೊಂದು ವಾಹನಕ್ಕೆ ಕಾರು ಡಿಕ್ಕಿ: ನಾಲ್ವರು ವಿದ್ಯಾರ್ಥಿಗಳ ದುರ್ಮರಣ - Nashik Sinnar highway
ಮಹಾರಾಷ್ಟ್ರದ ನಾಸಿಕ್ ಮತ್ತು ಸಿನ್ನಾರ್ ಹೆದ್ದಾರಿಯ ಮಹೋದರಿ ಘಾಟ್ನಲ್ಲಿ ನಡೆದ ಕಾರು ಅಪಘಾತದಲ್ಲಿ ನಾಲ್ವರು ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಟೈರ್ ಸ್ಫೋಟಿಸಿ ಮತ್ತೊಂದು ವಾಹನಕ್ಕೆ ಕಾರು ಡಿಕ್ಕಿ: ನಾಲ್ವರು ವಿದ್ಯಾರ್ಥಿಗಳ ದುರ್ಮರಣ
ಕಾರಿನಲ್ಲಿ ಬರುತ್ತಿದ್ದಾಗ ಟೈರ್ ಸ್ಫೋಟಗೊಂಡು ಡಿವೈಡರ್ ದಾಟಿ ಬಂದು ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಮತ್ತೊಂದು ಕಾರಿದಲ್ಲಿದ್ದವರೂ ಕೂಡ ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿಗಳ ಗುರುತು ಪತ್ತೆಯಾಗಿಲ್ಲ. ಎರಡೂ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ವಿಷಯ ತಿಳಿದು ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಬೈಕ್ಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ: ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ