ಕರ್ನಾಟಕ

karnataka

ETV Bharat / bharat

ಹಿಟ್​ ಅಂಡ್​ ರನ್​ ಕೇಸ್​: ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಕಾರ್​, ಸ್ಥಳದಲ್ಲೇ ಐವರ ಸಾವು..!

ಹಿಮಾಚಲ ಪ್ರದೇಶದ ಸೋಲನ್‌ನಲ್ಲಿ ಪಾದಚಾರಿಗಳ ಮೇಲೆ ಹರಿದ ಕಾರ್ ​- ಐವರು ವಲಸೆ ಕಾರ್ಮಿಕರು ಸ್ಥಳದಲ್ಲೇ ಸಾವು - ನಾಲ್ವರು ಗಂಭೀರ ಗಾಯ- ಪಾದಚಾರಿಗಳು ಕಾಲ್ನಡಿಗೆಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ವೇಗವಾಗಿ ಬಂದು ಕಾರ್​- ಪ್ರತ್ಯಕ್ಷದರ್ಶಿಗಳ ವಿಚಾರಣೆ ನಡೆಸಿದ ಪೊಲೀಸರು.

Accident in Solan
ಹಿಟ್​ ಅಂಡ್​ ರನ್​ ಕೇಸ್

By

Published : Mar 7, 2023, 5:25 PM IST

ಸೋಲನ್ (ಹಿಮಾಚಲ ಪ್ರದೇಶ):ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಧರಂಪುರದಲ್ಲಿ ಮಂಗಳವಾರ ಕಲ್ಕಾ-ಶಿಮ್ಲಾ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ- 5ರಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳ ಗುಂಪಿಗೆ ವೇಗವಾಗಿ ಬಂದ ಇನ್ನೋವಾ ಕಾರ್​ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ವಲಸೆ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದರು.

ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಕಾರ್​, ಸ್ಥಳದಲ್ಲೇ ಐವರು ಸಾವು.

ಪಾದಚಾರಿಗಳು ಕೆಲಸಕ್ಕೆ ಹೋಗುತ್ತಿದ್ದ ವೇಳೆ ಅಪಘಾತ:ಪಾದಚಾರಿಗಳು ಕೆಲಸಕ್ಕೆ ಹೋಗುತ್ತಿದ್ದಾಗ ಕಾರು ಜೋರಾಗಿ ಡಿಕ್ಕಿ ಹೊಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಮೃತರ ಗುರುತು ಪತ್ತೆ ಹಚ್ಚಲು ಸ್ಥಳೀಯ ಅಧಿಕಾರಿಗಳು ಕಾರ್ಯದಲ್ಲಿ ನಿರತರಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು, ಈಗಾಗಲೇ ಇನ್ನೋವಾ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಗಾಯಗೊಂಡ ನಾಲ್ವರನ್ನು ಧರ್ಮಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದಾರೆ. ವೈದ್ಯರು ಸೂಚನೆ ಮೇರೆಗೆ, ಗಾಯಗೊಂಡ ಕಾರ್ಮಿಕರಲ್ಲಿ ಒಬ್ಬರನ್ನು ಹೆಚ್ಚಿನ ಆರೈಕೆಗಾಗಿ ಚಂಡೀಗಢದ ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಶನ್ ಮತ್ತು ರಿಸರ್ಚ್ ಕಳುಹಿಸಲಾಗಿದೆ.

ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯ:ಅಪಘಾತಕ್ಕೆ ಈಡಾಗಿರುವ ಕಾರ್​ ಸೋಲನ್‌ನಿಂದ ಪರ್ವಾನೂಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಸುಕ್ಕಿ ಜೋರಿಯಲ್ಲಿ ಸಾಗುತ್ತಿದ್ದಾಗ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾರ್ಮಿಕರ ಮೇಲೆ ಹರಿದಿದೆ. ಕಾರ್​ ಚಾಲಕನೊಂದಿಗೆ ಇತರ ವಾಹನ ಸವಾರರು ತುರ್ತು ಸೇವಾ ಅಧಿಕಾರಿಗಳಿಗೆ ಮಾಹಿತಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು.

ಹಿಮಾಚಲ ಪ್ರದೇಶದ ಸೋಲನ್‌ನಲ್ಲಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಕಾರ್, ನಂತರ ರಸ್ತೆ ಪಕ್ಕದ ಕಬ್ಬಣದ ತಡೆಗೋಡೆಗೆ ಗುದ್ದಿರುವ ದೃಶ್ಯ

ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಟ್ವೀಟ್: "ಸೋಲನ್‌ನ ಧರಂಪುರ ಬಳಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮಾರು 7ರಿಂದ 9 ಕೂಲಿ ಕಾರ್ಮಿಕರಿಗೆ ವೇಗವಾಗಿ ಬಂದ ಕಾರ್​ ಡಿಕ್ಕಿ ಹೊಡೆರುವುದು ದುಃಖದ ವಿಚಾರವಾಗಿದೆ. ಈ ಅಪಘಾತದಲ್ಲಿ 5 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಉಳಿದ ಕಾರ್ಮಿಕರ ಸ್ಥಿತಿ ತುಂಬಾ ಗಂಭೀರವಾಗಿದೆ. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ. ಗಾಯಾಳು ಕಾರ್ಮಿಕರು ಬೇಗ ಗುಣಮುಖರಾಗಲಿ'' ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕ ವಿನೋದ್ ಸುಲ್ತಾನಪುರಿ ಭೇಟಿ:ಕಾಂಗ್ರೆಸ್ ಶಾಸಕ (ಕಸೌಲಿ ಅಸೆಂಬ್ಲಿ) ವಿನೋದ್ ಸುಲ್ತಾನಪುರಿ ಅಪಘಾತ ಸ್ಥಳಕ್ಕೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಸಹ ಭೇಟಿ ಮಾಡಿದರು. ಗಾಯಾಳುಗಳ ಸ್ಥಿತಿಗತಿ ಕುರಿತು ವೈದ್ಯರ ಬಳಿಯೂ ಶಾಸಕರು ವಿಚಾರಿಸಿದರು. ಸೋಲನ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವೀರೇಂದ್ರ ಶರ್ಮಾ ಕೂಡ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ್ದರು.

ವಿಚಾರಣೆ ಆರಂಭಿಸಿದ ಪೊಲೀಸರು:ಅಪಘಾತದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಧರಂಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಸದ್ಯ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಆ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸುತ್ತಿದ್ದಾರೆ. ಅಪಘಾತದ ಬಗ್ಗೆ ಸ್ಥಳೀಯರು ಮತ್ತು ಪ್ರತ್ಯಕ್ಷದರ್ಶಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:₹245 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ; ಐವರು ಇರಾನ್‌ ಪ್ರಜೆಗಳ ಬಂಧನ

ABOUT THE AUTHOR

...view details