ಪುಲ್ವಾಮಾ (ಕಾಶ್ಮೀರ): ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಉಗರ್‌ಗುಂಡ್ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ವಲಸೆ ಕಾರ್ಮಿಕನೊಬ್ಬ ಗಾಯಗೊಂಡಿದ್ದಾನೆ. ಕಾರ್ಮಿಕನನ್ನು ಪಶ್ಚಿಮ ಬಂಗಾಳ ಮೂಲದ ಮುನೀರುಲ್ ಇಸ್ಲಾಂ ಎಂದು ಗುರುತಿಸಲಾಗಿದೆ.
ಪುಲ್ವಾಮಾದಲ್ಲಿ ಉಗ್ರರ ದಾಳಿ: ವಲಸೆ ಕಾರ್ಮಿಕನಿಗೆ ಗಾಯ - ಭಯೋತ್ಪಾದಕರ ದಾಳಿ
ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ವಲಸೆ ಕಾರ್ಮಿಕನೊಬ್ಬ ಗಾಯಗೊಂಡಿದ್ದಾನೆ.
Militant attack in Pulwama: Migrant worker injured
ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಈ ಘಟನೆ ನಡೆದ ಪ್ರದೇಶದ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ದಾಳಿ ನಡೆದ ಕೂಡಲೇ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದಿದ್ದು, ದಾಳಿಕೋರರನ್ನು ಹಿಡಿಯಲು ಶೋಧ ನಡೆಸಲಾಗುತ್ತಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.