ರಜೌರಿ(ಜಮ್ಮು ಕಾಶ್ಮೀರ): ಭಾರತದ ಗಡಿಯೊಳಗೆ ಒಳನುಸುಳಲು ಯತ್ನಿಸಿದ ಓರ್ವ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಗುಂಡಿಟ್ಟು ಕೊಂದಿರುವ ಘಟನೆ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ನಲ್ಲಿ ನಡೆದಿದೆ.
ಬುಧವಾರ ಬೆಳಗ್ಗೆ 7 ಗಂಟೆಗೆ ಭಯೋತ್ಪಾದಕರ ಗುಂಪು ನೌಶೇರಾ ಸೆಕ್ಟರ್ನಲ್ಲಿ ಒಳನುಸುಳಲು ಯತ್ನಿಸಿದ್ದು, ಈ ವೇಳೆ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಗುಂಡಿನ ಚಕಮಕಿ ವೇಳೆ ಓರ್ವ ಭಯೋತ್ಪಾದಕರ ಸಾವನ್ನಪ್ಪಿದ್ದು, ಉಳಿದವರು ಪರಾರಿಯಾಗಿದ್ದಾರೆ.
ಭಯೋತ್ಪಾದಕನ ಮೃತದೇಹದೊಂದಿಗೆ, ಎಕೆ-47, ಎಕೆ-47ನ ನಾಲ್ಕು ಮ್ಯಾಗಜೀನ್ಗಳು, ಎರಡು ಹ್ಯಾಂಡ್ ಗ್ರೆನೇಡ್ಗಳನ್ನು ಭದ್ರತಾ ಪಡೆ ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಇಲ್ಲಿ 'ಪ್ರಭು' ಅಲ್ಲಿ 'ಭಗವಂತ'.. ಇಬ್ಬರಿಗೂ ಮಂತ್ರಿ ಭಾಗ್ಯ: ಕಲ್ಲರಳಿ ಹೂವಾದ ಕಥೆ ರೋಚಕ
ಭಯೋತ್ಪಾದಕರ ಒಳನುಸುಳುವಿಕೆಯನ್ನು ವಿಫಲಗೊಳಿಸಿದ ಬೆನ್ನಲ್ಲೇ ಲೈನ್ ಆಫ್ ಕಂಟ್ರೋಲ್ನಲ್ಲಿ ಭದ್ರತಾ ಪಡೆ ತೀವ್ರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.