ಕರ್ನಾಟಕ

karnataka

ETV Bharat / bharat

ಕುಪ್ವಾರ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಖತಂ, ಮತ್ತೊಬ್ಬನ ಸೆರೆ - ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ

ಕುಪ್ವಾರದಲ್ಲಿ ಭದ್ರತಾ ಪಡೆಗಳು ನಡೆಸಿದ ಉಗ್ರ ದಮನ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಮತ್ತೊಬ್ಬನನ್ನು ಬಂಧಿಸಲಾಗಿದೆ.

ಕುಪ್ವಾರ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಖತಂ, ಮತ್ತೊಬ್ಬನ ಸೆರೆ
ಕುಪ್ವಾರ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಖತಂ, ಮತ್ತೊಬ್ಬನ ಸೆರೆ

By

Published : Jun 19, 2022, 3:33 PM IST

Updated : Jun 19, 2022, 5:01 PM IST

ಕುಪ್ವಾರ(ಜಮ್ಮು ಕಾಶ್ಮೀರ):ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಬೇಟೆಯಾಡಲಾಗಿದೆ. ಇದೇ ವೇಳೆ ಸೈನಿಕರು ಮತ್ತೊಬ್ಬ ಭಯೋತ್ಪಾದಕನ ಹೆಡೆಮುರಿ ಕಟ್ಟಿದ್ದಾರೆ.

ಈ ಬಗ್ಗೆ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು, ಕುಪ್ವಾರದ ಲೋಲಾಬ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಬಂಧಿತ ಉಗ್ರ ಶೋಕೆಟ್​ ಅಹ್ಮದ್​ ಶೇಖ್​ ನೀಡಿದ ಮಾಹಿತಿಯ ಮೇರೆಗೆ ಜಂಟಿ ಕಾರ್ಯಾಚರಣೆ ನಡೆಸಿದ ಕುಪ್ವಾರ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಉಗ್ರರ ಅಡಗುತಾಣಗಳ ಮೇಲೆ ದಾಳಿ ಮಾಡಿದಾಗ ಅಲ್ಲಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಈ ವೇಳೆ ಯೋಧರು ಪ್ರತಿದಾಳಿ ನಡೆಸಿದರು. ಕಾರ್ಯಾಚರಣೆಯಲ್ಲಿ ಉಗ್ರನೋರ್ವನನ್ನು ಜೀವಂತವಾಗಿ ಬಂಧಿಸಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಓದಿ:ಸೈಕಲ್ ಸವಾರಿ ವೇಳೆ ಆಯತಪ್ಪಿ ಬಿದ್ದ ಜೋ ಬೈಡನ್

Last Updated : Jun 19, 2022, 5:01 PM IST

ABOUT THE AUTHOR

...view details