ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ.
ಶೋಪಿಯಾನ್ನಲ್ಲಿ ಎನ್ಕೌಂಟರ್: ಇಬ್ಬರು ಭಯೋತ್ಪಾದಕರ ಹುಟ್ಟಡಗಿಸಿದ ಯೋಧರು - ಗಡಿಯಲ್ಲಿ ಗುಂಡಿನ ಕಾಳಗ
ಶನಿವಾರ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಯೋಧರು ಇಬ್ಬರು ಉಗ್ರರನ್ನು ಸದೆಬಡಿದಿದ್ದಾರೆ. ಹತ್ಯೆಯಾದ ಉಗ್ರನ ಗುರುತು ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಬಾರಾಮುಲ್ಲಾ ಜಿಲ್ಲೆಯ ಹಡಿಪೋರಾ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಅಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಉಗ್ರರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಅವರು ಭಾರತೀಯ ಯೋಧರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತೀಯ ಯೋಧರು ಸಹ ಪ್ರತಿದಾಳಿ ನಡೆಸಿದ್ದು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಹತ್ಯೆಗೀಡಾದ ಮೃತ ಉಗ್ರರ ಗುರುತು ಪತ್ತೆಯಾಗಿಲ್ಲ. ಹೀಗಾಗಿ ಅವರ ಪತ್ತೆಗೆ ಮತ್ತು ಯಾವ ಉಗ್ರ ಸಂಘಟನೆಗೆ ಸೇರಿದವರು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.