ಬಾರಾಮುಲ್ಲಾ(ಶ್ರೀನಗರ):ಜಿಲ್ಲೆಯ ಸೊಪೋರ್ ಬಸ್ ನಿಲ್ದಾಣದ ಬಳಿಯ ಪೊಲೀಸ್ ಚೌಕಿಯಲ್ಲಿ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಲಾಗಿದ್ದು, ಅದೃಷ್ಟವಶಾತ್ ಇದರಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ರಸ್ತೆ ಪಕ್ಕದಲ್ಲಿ ಗ್ರೆನೇಡ್ ಸ್ಫೋಟಗೊಂಡಿದ್ದು, ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಉತ್ತರ ಕಾಶ್ಮೀರದ ಸೊಪೋರ್ ಪಟ್ಟಣದ ಪೊಲೀಸ್ ಚೌಕಿ ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದ್ದು, ಇದರಿಂದ ಸ್ಥಳೀಯರಿಗೆ ಕೆಲಹೊತ್ತು ದಿನನಿತ್ಯದ ಜೀವನಕ್ಕೆ ತೊಂದರೆಯಾಯಿತು.