ಕುಲ್ಗಾಂ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಲ್ಗಾಂ ಜಿಲ್ಲೆಯಲ್ಲಿ ನಿನ್ನೆ ಆರಂಭವಾಗಿದ್ದ ಎನ್ಕೌಂಟರ್ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ (Hizbul Mujahideen) ಸಂಘಟನೆಗೆ ಸೇರಿದ ಮತ್ತೊಬ್ಬ ಉಗ್ರನನ್ನು ಭದ್ರತಾ ಪಡೆಗಳು ಸದೆ ಬಡಿದಿವೆ
ಕುಲ್ಗಾಂನ ಚಾವಲ್ಗಾಮ್ ಪ್ರದೇಶದಲ್ಲಿ ನಿನ್ನೆ ಮಧ್ಯಾಹ್ನ ಆರಂಭವಾಗಿದ್ದ ಎನ್‌ಕೌಂಟರ್ (Kulgam Encounter) ಇಂದು ಬೆಳಗ್ಗೆ ಮುಕ್ತಾಯಗೊಂಡಿದೆ. ಪೊಲೀಸರು ಮತ್ತು ಭಾರತೀಯ ಸೇನೆಯ ಯೋಧರು ನಡೆಸಿದ ಈ ಜಂಟಿ ಕಾರ್ಯಾಚರಣೆಯಲ್ಲಿ ನಿನ್ನೆ ಓರ್ವ ಉಗ್ರನನ್ನು ಭದ್ರತಾ ಪಡೆ ಗುಂಡಿಕ್ಕಿ ಕೊಂದಿತ್ತು. ಇಂದು ಬೆಳಗ್ಗೆ ಮತ್ತೊಬ್ಬನನ್ನು ಹೊಡೆದುರುಳಿಸಲಾಗಿದೆ.