ಮುಂಬೈ: ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಸಚಿವ ಆದಿತ್ಯ ಠಾಕ್ರೆಗೂ ಮಹಾಮಾರಿ ಕೊರೊನಾ ಸೋಂಕು ತಗುಲಿದೆ.
ಮಹಾರಾಷ್ಟ್ರದ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವ ಆಗಿರುವ ಆದಿತ್ಯ ಠಾಕ್ರೆ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ನನ್ನಲ್ಲಿ ಕೋವಿಡ್ ಸೋಂಕಿನ ಕೆಲ ಲಕ್ಷಣಗಳು ಕಂಡು ಬಂದಿದ್ದು, ಕಳೆದ ಕೆಲ ದಿನಗಳಿಂದ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಕೋವಿಡ್ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹಬ್ಬುತ್ತಿರುವ ಕಾರಣ ಎಲ್ಲರೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ ಎಂದಿದ್ದಾರೆ.