ನವದೆಹಲಿ:ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್. ಜೈಶಂಕರ್ ಅವರಿಗೆ ಕೊರೊನಾ ದೃಢಪಟ್ಟಿದ್ದು, ಇದಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ನನಗೆ ಕೋವಿಡ್ ಇರುವುದು ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ತಕ್ಷಣವೇ ಪರೀಕ್ಷೆ ಮಾಡಿಸಿಕೊಂಡು, ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಕೋವಿಡ್ ಪರೀಕ್ಷೆಗೊಳಪಡುವುದಕ್ಕೂ ಮುಂಚಿತವಾಗಿ ವಿದೇಶಾಂಗ ಸಚಿವ ಎಸ್.ಜೈಶಂಕರ್, ಫ್ರೆಂಚ್ ರಾಯಭಾರಿ ಜೊತೆ ಮಾತುಕತೆ ನಡೆಸಿದ್ದರು.
ಇದನ್ನೂ ಓದಿರಿ:ಯುಪಿ ವಿಧಾನಸಭೆ ಚುನಾವಣೆಯಿಂದ 'ಭಾರತದ ಭವಿಷ್ಯ ನಿರ್ಧಾರ': ಅಮಿತ್ ಶಾ