ಭೋಪಾಲ್(ಮಧ್ಯಪ್ರದೇಶ): ದೇಶಾದ್ಯಂತ ಎರಡನೇ ಹಂತದ ಕೋವಿಡ್ ಅಲೆ ಜೋರಾಗಿದ್ದು, ಈಗಾಗಲೇ ನಿತ್ಯ ಲಕ್ಷಾಂತರ ಸೋಂಕಿತ ಪ್ರಕರಣಗಳು ಪತ್ತೆಯಾಗ್ತಿವೆ. ಇದರ ಮಧ್ಯೆ ಮಧ್ಯಪ್ರದೇಶದ ಸಚಿವರೊಬ್ಬರು ಏರ್ಪೋರ್ಟ್ನಲ್ಲಿ ವಿಶೇಷವಾಗಿ ಪೂಜೆ ಸಲ್ಲಿಸಿದ್ದಾರೆ.
ಮಧ್ಯಪ್ರದೇಶ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಷಾ ಠಾಕೂರ್ ಈ ರೀತಿಯಾಗಿ ನಡೆದುಕೊಂಡಿದ್ದು, ಇದೀಗ ಎಲ್ಲೆಡೆ ಸುದ್ದಿಯಾಗಿದ್ದಾರೆ. ಮಧ್ಯಪ್ರದೇಶದ ಇಂದೋರ್ನಲ್ಲಿನ ವಿಮಾನ ನಿಲ್ದಾಣದಲ್ಲಿ ದೇವಿ ಅಹಲ್ಯಾ ಬಾಯಿ ಹೋಲ್ಕರ್ ಪ್ರತಿಮೆ ಮುಂದೆ ಕುಳಿತುಕೊಂಡು ಪೂಜೆ ಮಾಡಿದ್ದಾರೆ. ವಿಶೇಷವೆಂದರೆ ದೇವಿ ಮುಂದೆ ಕುಳಿತುಕೊಂಡು ಚಪ್ಪಾಳೆ ತಟ್ಟಿ, ಭಜನೆ ಹಾಡಿದ್ದಾರೆ. ಈ ವೇಳೆ ವಿಮಾನ ನಿಲ್ದಾಣದ ಕೆಲ ಅಧಿಕಾರಿಗಳು ಉಪಸ್ಥಿತರಿದ್ದರು.