ಕರ್ನಾಟಕ

karnataka

ETV Bharat / bharat

ಕೇಂದ್ರ-ರೈತರ ನಡುವೆ ಡಿ.9ಕ್ಕೆ ಮತ್ತೊಂದು ಸುತ್ತಿನ ಸಭೆ ; ಪ್ರಧಾನಿ ಜತೆ ಚರ್ಚಿಸಿ ಸೂಕ್ತ ನಿರ್ಧಾರ - protest against farm laws

ಡಿಸೆಂಬರ್ 9ರ ಮೊದಲು ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿ, ನಂತರ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಕಿಸಾನ್​​ ಮಜ್​ದೂರ್​​ ಮಹಾಸಂಘದ ( ಮಹಾರಾಷ್ರ್ರ) ಸಂದೀಪ್ ಗಿಡ್ಡೆ ಹೇಳಿದರು..

'Ministers assured us of decision on farm laws after discussion with PM'
ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ: ಕೇಂದ್ರ - ರೈತರ ನಡುವೆ ಡಿ. 9ರಂದು ಮತ್ತೊಂದು ಸಭೆ

By

Published : Dec 6, 2020, 7:18 AM IST

ನವದೆಹಲಿ: ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಹಾಗೂ ಕೇಂದ್ರ ಸರ್ಕಾರದ ನಡುವೆ ನಿನ್ನೆ 5ನೇ ಸುತ್ತಿನ ಮಾತುಕತೆ ನಡೆಯಿತು. ವಿಜ್ಞಾನ ಭವನದಲ್ಲಿ ನಡೆದ ಸಭೆಯಲ್ಲಿ ಯಾವುದೇ ತೀರ್ಮಾನಕ್ಕೆ ಬರದ ಕಾರಣ ಕೇಂದ್ರ ಸರ್ಕಾರದ ಮೂವರು ಮಂತ್ರಿಗಳು ಮತ್ತು 32 ಪ್ರಮುಖ ರೈತ ಸಂಘಟನೆಗಳ ಪ್ರತಿನಿಧಿಗಳ ನಡುವೆ ಮತ್ತೊಮ್ಮೆ ಡಿಸೆಂಬರ್ 9ರಂದು ಸಭೆ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಚರ್ಚಿಸಿದ ಬಳಿಕ ಈ ಕೃಷಿ ಕಾನೂನುಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆಂದು ನಿನ್ನೆ ನಡೆದ ಸಭೆಯಲ್ಲಿ ಹಾಜರಿದ್ದ ರೈತ ಮುಖಂಡರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:5ನೇ ಸಭೆಯಲ್ಲೂ ಕೇಂದ್ರ - ರೈತರ ನಡುವೆ ಮೂಡದ ಒಮ್ಮತ: ಡಿ.9ಕ್ಕೆ ಮತ್ತೊಂದು ಸುತ್ತಿನ ಮಾತುಕತೆ

ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳದಿದ್ದರೆ ಸಭೆಯನ್ನು ಬಹಿಷ್ಕರಿಸುವುದಾಗಿ ರೈತ ಮುಖಂಡರು ಎಚ್ಚರಿಸಿದ ವೇಳೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ಕೇಂದ್ರ ಸಚಿವ ಸೋಮ್ ಪ್ರಕಾಶ್ ಅವರು ಈ ವಿಷಯವನ್ನು ಪ್ರಧಾನಮಂತ್ರಿಗೆ ತಿಳಿಸಲಿದ್ದೇವೆ. ಕ್ಯಾಬಿನೆಟ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ:ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ: ಕೇಂದ್ರ - ರೈತರ ನಡುವೆ ಇಂದು ಮತ್ತೊಂದು ಸುತ್ತಿನ ಮಾತುಕತೆ

ಡಿಸೆಂಬರ್ 9ರ ಮೊದಲು ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿ, ನಂತರ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಕಿಸಾನ್​​ ಮಜ್​ದೂರ್​​ ಮಹಾಸಂಘದ ( ಮಹಾರಾಷ್ರ್ರ) ಸಂದೀಪ್ ಗಿಡ್ಡೆ ಹೇಳಿದರು.

ABOUT THE AUTHOR

...view details