ಕಾನ್ಪುರ ದೇಹತ್(ಉತ್ತರಪ್ರದೇಶ):ಆಸ್ಪತ್ರೆಯೊಂದರ ಮುಂಭಾಗ ನಡೆದ ಗಲಾಟೆಯಲ್ಲಿ ಪೊಲೀಸರು ಮಗುವನ್ನು ಎತ್ತಿಕೊಂಡಿದ್ದ ವ್ಯಕ್ತಿಯ ಮೇಲೆ ತೀವ್ರ ಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವ್ಯಕ್ತಿಯ ಪತ್ನಿ ಮತ್ತು ಮಗಳು ಆಗ್ರಹಿಸಿದ್ದಾರೆ.
ನಿನ್ನೆ ನಡೆದ ಗಲಾಟೆಯ ವೇಳೆ ಮಗುವನ್ನು ಎತ್ತಿಕೊಂಡು ಬರುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸರು ಲಾಠಿಯಿಂದ ಹಲ್ಲೆ ನಡೆಸಿದ್ದರು. ಈ ವೇಳೆ, ಆ ವ್ಯಕ್ತಿ ಮಗು ತನ್ನದೇ, ಮಗುವಿಗೆ ಪೆಟ್ಟು ಬೀಳುತ್ತೆ ಹೊಡೆಯಬೇಡಿ ಎಂದು ಕೇಳಿಕೊಂಡಿದ್ದಾನೆ. ಆದರೂ ಬಿಡದ ಪೊಲೀಸರು ಆ ವ್ಯಕ್ತಿಯ ಮೇಲೆ ತೀವ್ರ ಹಲ್ಲೆ ನಡೆಸಿದ್ದರು. ಇದನ್ನು ಸಾರ್ವಜನಿಕರೊಬ್ಬರು ವಿಡಿಯೋ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪೊಲೀಸರ ದೌರ್ಜನ್ಯದ ವಿಡಿಯೋ ವೈರಲ್ ಆಗಿದ್ದು, ಎಲ್ಲೆಡೆ ಭಾರೀ ಟೀಕೆ ವ್ಯಕ್ತವಾಗಿದೆ.