ಅಲಿಘಡ್/ಉತ್ತರ ಪ್ರದೇಶ: ಅಲಿಘಡ್ನಲ್ಲಿ ಅಪ್ರಾಪ್ತೆಯೊಬ್ಬಳ ಮೇಲೆ ಮೂರು ಜನರಿಂದ ಸಾಮೂಹಿಕ ಅತ್ಯಾಚಾರ ನಡೆದಿದೆ.
ಈ ಬಗ್ಗೆ ಎಸ್ಪಿ ಶುಭ್ನಮ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಬಾಲಕಿ ಮೈದಾನಕ್ಕೆ ತೆರಳಿದ್ದ ವೇಳೆ ಮೂವರು ಕಾಮುಕರು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬಸ್ಥರು ದೂರು ನೀಡಿದ್ದು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಇನ್ನು ಪ್ರಾಥಮಿಕ ತನಿಖೆ ಆಧರಿಸಿ ಮೂವರು ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ. ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಗೌತಮ್ ಬುದ್ಧ್ ನಗರದ ಅಪ್ರಾಪ್ತೆಯೋರ್ವಳ ಮೇಲೆ ಅತ್ಯಾಚಾರ ನಡೆದಿದ್ದು, ಪ್ರಕರಣ ಸಂಬಂಧ ಅಪ್ರಾಪ್ತೆಯ ಚಿಕ್ಕಮ್ಮ ಸೇರಿ ಇಬ್ಬರ ವಿರುದ್ಧ ದೂರು ದಾಖಲಾಗಿದೆ.
ಇದನ್ನೂ ಓದಿ:ನಾಲ್ಕು ರಾಜ್ಯ ಚುನಾವಣೆ; ಬಿಜೆಪಿಯಿಂದ ಚುನಾವಣಾ ಮೇಲುಸ್ತುವಾರಿಗಳ ನೇಮಕ