ಮೌಂಟ್ ಅಬು (ರಾಜಸ್ಥಾನ):15 ವರ್ಷದ ಬಾಲಕಿ ಕೆಲವು ವಸ್ತುಗಳನ್ನು ಖರೀದಿಸಲು ಮಾರುಕಟ್ಟೆಗೆ ಹೋಗಿ ಹಿಂತಿರುಗುವಾಗ ಇಬ್ಬರು ದುಷ್ಕರ್ಮಿಗಳು ಆಕೆಯನ್ನು ಬಲವಂತವಾಗಿ ಶಾಲೆಯ ಆವರಣಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಇಲ್ಲಿನ ಮ್ಯೂಸಿಯಂ ಕ್ರಾಸ್ರೋಡ್ಸ್ನಲ್ಲಿರುವ ಗರ್ಲ್ಸ್ ಹೈಯರ್ ಸೆಕೆಂಡರಿ ಸ್ಕೂಲ್ನಲ್ಲಿ ನಡೆದಿದೆ.
ಹೌದು, ಪಿಯು ವ್ಯಾಸಂಗ ಮಾಡುತ್ತಿದ್ದ ಬಾಲಕಿಯೊಬ್ಬಳು ಕೆಲವೊಂದು ವಸ್ತುಗಳನ್ನು ಖರೀದಿಸಲು ಸ್ಥಳೀಯ ಮಾರುಕಟ್ಟೆ ಹೋಗಿದ್ದಾರೆ. ವಾಪಸ್ಸಾಗುತ್ತಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಬಾಲಕಿಯನ್ನು ಪಕ್ಕದ ಶಾಲೆಯ ಆವರಣದಲ್ಲಿ ಕರೆದೊಯ್ದಿದ್ದಾರೆ. ಅಲ್ಲಿ ಇಬ್ಬರು ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.