ಕರ್ನಾಟಕ

karnataka

ETV Bharat / bharat

ದನದ ಕೊಟ್ಟಿಗೆಗೆ ಕರೆದೊಯ್ದು ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ - ದನದ ಕೊಟ್ಟಿಗೆಗೆ ಕರೆದೊಯ್ದು ಅಪ್ರಾಪ್ತೆಯ ಅತ್ಯಾಚಾರ

ಬಾಲಕಿ ತನ್ನ ತಂದೆ-ತಾಯಿಗಳಿಗೆ ವಿಷಯ ತಿಳಿಸಿದ್ದು, ಕೂಡಲೇ ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡಿದ್ದಾರೆ. ಅಪರಾಧಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ..

minor-girl-rape-at-krishna-district
ದನದ ಕೊಟ್ಟಿಗೆಗೆ ಕರೆದೊಯ್ದು ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ

By

Published : Sep 4, 2021, 4:06 PM IST

ಕೃಷ್ಣಾ(ಆಂಧ್ರಪ್ರದೇಶ): ಮೈಸೂರು ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಆಂಧ್ರಪ್ರದೇಶದಲ್ಲಿ ಇದೇ ರೀತಿಯ ರೇಪ್ ಕೇಸ್ ಬೆಳಕಿಗೆ ಬಂದಿದೆ. ವ್ಯಕ್ತಿಯೋರ್ವ ಬಾಲಕಿಯನ್ನು ಪುಸಲಾಯಿಸಿ, ತನ್ನಿಬ್ಬರು ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ.

ಕೃಷ್ಣಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಾಲಕಿಯನ್ನು ಪುಸಲಾಯಿಸಿ, ಮನೆಯಿಂದ ದನದ ಕೊಟ್ಟಿಗೆಗೆ ಕರೆದುಕೊಂಡ ಹೋದ ವ್ಯಕ್ತಿಯೋರ್ವ, ಇನ್ನಿಬ್ಬರು ವ್ಯಕ್ತಿಗಳೊಂದಿಗೆ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ.

ನಂತರ ಬಾಲಕಿಯನ್ನು ಆಕೆಯ ಮನೆಗೆ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ನೇಹಿತರೊಂದಿಗೆ ಬಾಲಕಿ ಹೊರಗೆ ತೆರಳಿರಬಹುದು ಎಂದು ಭಾವಿಸಿದ್ದ ಪೋಷಕರಿಗೆ, ಬಾಲಕಿ ಹರಿದ ಬಟ್ಟೆಗಳೊಂದಿಗೆ ಬಂದಾಗ ಆಘಾತವಾಗಿದೆ.

ಬಾಲಕಿ ತನ್ನ ತಂದೆ-ತಾಯಿಗಳಿಗೆ ವಿಷಯ ತಿಳಿಸಿದ್ದು, ಕೂಡಲೇ ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡಿದ್ದಾರೆ. ಅಪರಾಧಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ.

ಇದನ್ನೂ ಓದಿ:ವೈರಲ್ ಫೀವರ್​ಗೆ 40 ಮಕ್ಕಳು ಸೇರಿ 60 ಜನ ಬಲಿ.. ಜನರಲ್ಲಿ ಹೆಚ್ಚಾದ ಭೀತಿ..

ABOUT THE AUTHOR

...view details