ಶಿಮ್ಲಾ (ಹಿಮಾಚಲ ಪ್ರದೇಶ):ರಾಜಧಾನಿ ಶಿಮ್ಲಾದ ಟುಟು ಎಂಬಲ್ಲಿ ಅಪ್ರಾಪ್ತೆ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿರುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಇದೀಗ ಗರ್ಭಿಣಿಯಾಗಿದ್ದು, ಪೋಷಕರು ಪೊಲೀಸ್ ಠಾಣೆಗೆ ತೆರಳಿ ಆರೋಪಿ ವಿರುದ್ಧ ದೂರು ದಾಖಲು ಮಾಡಿದ್ದಾರೆ.
ಅಪ್ರಾಪ್ತೆ ಮೇಲೆ ನಿರಂತರ ರೇಪ್... ಗರ್ಭಿಣಿಯಾಗ್ತಿದ್ದಂತೆ ಹೊರಬಿದ್ದ ಪ್ರಕರಣ - ಬಾಲಕಿ ಮೇಲೆ ಕಾಮುಕನ ಅಟ್ಟಹಾಸ
ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದ ಬಾಲಕಿ ಮೇಲೆ ಕಾಮುಕನೋರ್ವ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ, ಅಪ್ರಾಪ್ತೆ ಮನೆಯಲ್ಲಿ ಏಕಾಂಗಿಯಾಗಿದ್ದ ಸಮಯದಲ್ಲಿ ಮನೆಯ ಪಕ್ಕದಲ್ಲಿ ವಾಸವಾಗಿದ್ದ ಅರ್ಜುನ್ ಎಂಬ ವ್ಯಕ್ತಿ ಆಕೆಯನ್ನ ಮನೆಗೆ ಕರೆದುಕೊಂಡು ಹೋಗಿ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಎರಡು ದಿನಗಳ ಹಿಂದೆ ಬಾಲಕಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಿದಾಗ ಆಕೆ ಗರ್ಭಿಣಿಯಾಗಿರುವ ವಿಷಯ ಬೆಳಕಿಗೆ ಬಂದಿದೆ. ಮನೆಯಲ್ಲಿ ಬಾಲಕಿ ಹಾಗೂ ಆಕೆಯ ತಂದೆ-ತಾಯಿ ಮಾತ್ರ ವಾಸವಾಗಿದ್ದು, ಪ್ರತಿದಿನ ಆಕೆಯನ್ನ ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗುತ್ತಿದ್ದರು.
ಘಟನೆ ಬಗ್ಗೆ ಗೊತ್ತಾಗುತ್ತಿದ್ದಂತೆ ಬಾಲಕಿ ತಾಯಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲು ಮಾಡಿದ್ದಾಳೆ. ತಲೆಮರೆಸಿಕೊಂಡಿರುವ ಆರೋಪಿಗೋಸ್ಕರ ಶೋಧ ಕಾರ್ಯ ಶುರು ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.