ಬೀಡ್, ಮಹಾರಾಷ್ಟ್ರ :ಅಪ್ರಾಪ್ತೆಯಾಗಿರುವ ವಿವಾಹಿತೆ ಮೇಲೆ ಕಳೆದ ಆರು ತಿಂಗಳ ಅವಧಿಯಲ್ಲಿ 400 ಮಂದಿ ಅತ್ಯಾಚಾರ (Rape on minor) ಎಸಗಿರುವ ಆರೋಪ ಕೇಳಿ ಬಂದಿದೆ. ಮಹಾರಾಷ್ಟ್ರದ ಬೀಡ್ (Beed in Maharashtra) ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕುರಿತು ಬೀಡ್ ಪೊಲೀಸ್ ವರಿಷ್ಠಾಧಿಕಾರಿ ರಾಜ ರಾಮಸಾಮಿ ಮಾಹಿತಿ ನೀಡಿದ್ದಾರೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದೆ. ಅಪ್ರಾಪ್ತೆ ಎರಡು ತಿಂಗಳ ಗರ್ಭಿಣಿಯಾಗಿದ್ದಾಳೆ.
ಸಂತ್ರಸ್ತೆ ನೀಡಿದ ದೂರನ್ನು ದಾಖಲು ಮಾಡಿಕೊಳ್ಳಲಾಗಿದೆ. ಬಾಲ್ಯ ವಿವಾಹ, ಅತ್ಯಾಚಾರ, ಕಿರುಕುಳ, ಪೊಕ್ಸೋ ಅಡಿಯಲ್ಲಿ (POSCO) ದೂರು ದಾಖಲು ಮಾಡಿಕೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಪೊಲೀಸರು ಕೂಡ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜ ರಾಮಸಾಮಿ ಹೇಳಿದ್ದಾರೆ.
ಇದನ್ನೂ ಓದಿ:'ಜೈ ಭೀಮ್' ಚಿತ್ರದ ಸೂರ್ಯ ಮೇಲೆ ಹಲ್ಲೆ ಮಾಡಿದ್ರೆ 1 ಲಕ್ಷ ಬಹುಮಾನ : ಪಿಎಂಕೆ ಜಿಲ್ಲಾ ಕಾರ್ಯದರ್ಶಿಯ ವಿವಾದಾತ್ಮಕ ಘೋಷಣೆ