ಶಿವಪುರಿ (ಮಧ್ಯಪ್ರದೇಶ): ಮಧ್ಯಪ್ರದೇಶ ರಾಜ್ಯದಲ್ಲಿ ದಿನೇ ದಿನೇ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗೆ, ಸಿಧಿ ಜಿಲ್ಲೆಯಲ್ಲಿ ಮಹಿಳೆಯ ಮೇಲೆ ಮೂವರು ಅತ್ಯಾಚಾರ ನಡೆಸಿ, ಅವಳ ಖಾಸಗಿ ಭಾಗಕ್ಕೆ ರಾಡ್ ಹಾಕಿದ್ದರು. ಆ ಮಹಿಳೆಯ ಸ್ಥಿತಿ ಇನ್ನೂ ಗಂಭೀರವಾಗಿದೆ. ಈ ಪ್ರಕರಣ ಮಾಸುವ ಮುನ್ನವೆ ಶಿವಪುರಿಯ ಪೋಹ್ರಿಯಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.
ಈ ಘಟನೆ ಪೋಹ್ರಿ ಪೊಲೀಸ್ ಠಾಣೆ ಪ್ರದೇಶದ ಹಳ್ಳಿಯೊಂದರಲ್ಲಿ, ಅದೇ ಗ್ರಾಮದಲ್ಲಿ ವಾಸಿಸುತ್ತಿದ್ದ ನಾಲ್ವರು ಅಪ್ರಾಪ್ತ ಬಾಲಕಿಯನ್ನ ಅಪಹರಿಸಿ ಅತ್ಯಾಚಾರ ವೆಸಗಿದ್ದಾರೆ. ಕುಟುಂಬ ಸದಸ್ಯರು ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾದ ಬಗ್ಗೆ ದೂರು ನೀಡಿದ್ದರು. ದೂರಿನಲ್ಲಿ ಮುವರು ಶಂಕಿತರ ಹೆಸರನ್ನು ಸೂಚಿಸಿದ್ದರು.