ಕರ್ನಾಟಕ

karnataka

ETV Bharat / bharat

ಬುಡಕಟ್ಟು ಜನಾಂಗದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ.. ಮೂವರು ಕಾಮುಕರ ಬಂಧನ - ಪಶ್ಚಿಮ ಬಂಗಾಳ ಅಪರಾಧ ಪ್ರಕರಣಗಳು

ಮೂವರು ಕಾಮುಕರು ಬಾಲಕಿಯನ್ನು ಆಕೆಯ ನಿವಾಸದಿಂದ ಬಲವಂತವಾಗಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಈ ಕೃತ್ಯ ಗಮನಕ್ಕೆ ಬರುತ್ತಿದ್ದಂತೆ ಬಾಲಕಿಯನ್ನು ರಕ್ಷಿಸಿರುವ ಕುಟುಂಬಸ್ಥರು ಬಳಿಕ ದೂರು ನೀಡಿದ್ದರು. ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪಶ್ಚಿಮ ಬಂಗಾಳದ ಶಾಂತಿನಿಕೇತನದಲ್ಲಿ ಈ ಪ್ರಕರಣ ನಡೆದಿದೆ.

Minor tribal girl raped
Minor tribal girl raped

By

Published : Nov 9, 2021, 7:10 AM IST

ಶಾಂತಿನಿಕೇತನ್ (ಪಶ್ಚಿಮ ಬಂಗಾಳ): ಇಲ್ಲಿನ ಬಿರ್ಭೂಮ್ ಜಿಲ್ಲೆಯ ಶಾಂತಿನಿಕೇತನದ ತನ್ಸುಲ್ ದಂಗಾ ಗ್ರಾಮದಲ್ಲಿ ಬುಡಕಟ್ಟು ಜನಾಂಗಕ್ಕೆ ಸೇರಿದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಸೋಮವಾರ ನಡೆದಿದೆ.

ಮೂವರು ಕಾಮುಕರು ಬಾಲಕಿಯನ್ನು ಆಕೆಯ ನಿವಾಸದಿಂದ ಬಲವಂತವಾಗಿ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಸಮೀಪದಲ್ಲೇ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಆಕೆ ಕಿರುಚಾಡುತ್ತಿದ್ದಂತೆ ಆಕೆಯ ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿದರಾದರೂ ಅಷ್ಟೊತ್ತಿಗಾಗಲೇ ಆರೋಪಿಗಳು ಪರಾರಿಯಾಗಿದ್ದರು. ನಂತರ ಕುಟುಂಬಸ್ಥರು ಸಂತ್ರಸ್ತೆಯನ್ನು ಶಾಂತಿನಿಕೇತನ ಠಾಣೆಗೆ ಕರೆದೊಯ್ದಿದ್ದಾರೆ.

ಕುಟುಂಬಸ್ಥರು ದೂರಿನಲ್ಲಿ ಮೂವರು ಆರೋಪಿಗಳನ್ನು ಹೆಸರಿಸಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿ, ಸೋಮವಾರವೇ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಶಾಂತಿನಿಕೇತನ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಓದಿ:ಹಲ್ಲು ನೋವಿನ ಚಿಕಿತ್ಸೆಗೆ ಬಂದ ಮಹಿಳೆಯ ಮೇಲೆ ವೈದ್ಯನಿಂದ ಅತ್ಯಾಚಾರ

ABOUT THE AUTHOR

...view details