ನೆಲ್ಲೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಬಳಿಕ ಆಕೆಯನ್ನು ಮದುವೆಯಾದ ವ್ಯಕ್ತಿಗಾಗಿ ಆಂಧ್ರಪ್ರದೇಶ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಮೂರು ದಿನಗಳ ಹಿಂದೆ ನೆಲ್ಲೂರಿನಲ್ಲಿ ಈ ಘಟನೆ ನಡೆದಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ) ಅಡಿಯಲ್ಲಿ 50 ವರ್ಷದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ನಾಗರಾಜು ತಿಳಿಸಿದ್ದಾರೆ.
ಚಿನ್ನಾ ಸುಬ್ಬಯ್ಯ ಎಂಬ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ನೆಲ್ಲೂರು ನಗರದ ಕೊಟ್ಟೂರಿನಿಂದ ಬಂದ ಶಂಕಿತ ವ್ಯಕ್ತಿ, ಅಪ್ರಾಪ್ತೆಯನ್ನು ಧಂಪೂರ್ ಗ್ರಾಮಕ್ಕೆ ಕರೆದೊಯ್ದು, ಅಲ್ಲಿ ಅವಳ ಮೇಲೆ ದೌರ್ಜನ್ಯ ನಡೆಸಿದ್ದಾನೆ ಎಂದು ಅಧಿಕಾರಿ ಹೇಳಿದ್ದಾರೆ.