ನವದೆಹಲಿ: ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ವಿರುದ್ಧ ವ್ಯಾಕ್ಸಿನೇಷನ್ ಬಗ್ಗೆ ಜಾಗೃತಿ ಮೂಡಿಸಲು ಮತ್ತು ದೇಶದಲ್ಲಿ ಲಸಿಕೆ ಅಭಿಯಾನದ ಬಗ್ಗೆ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಹರಡುತ್ತಿರುವ ವದಂತಿಗಳಿಗೆ ತೆರೆ ಎಳೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಸಂಬಂಧ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಜೂನ್ 21ರಿಂದ ಅಭಿಯಾನ ಆರಂಭಿಸಲಿದೆ ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
"ಜಾನ್ ಹೈ ಟು ಜಹಾನ್ ಹೈ" ಕಾರ್ಯಕ್ರಮದ ಅಂಗವಾಗಿ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು, ವಿವಿಧ ಸಾಮಾಜಿಕ-ಶಿಕ್ಷಣ ಸಂಸ್ಥೆಗಳು, ಎನ್‌ಜಿಒಗಳು ಮತ್ತು ಮಹಿಳಾ ಸ್ವ-ಸಹಾಯ ಗುಂಪುಗಳೊಂದಿಗೆ ಜೂನ್ 21 ರಂದು ಜಾಗೃತಿ ಅಭಿಯಾನವನ್ನು ಪ್ರಾರಂಭಿಸಲಿದೆ ಎಂದು ಅವರು ಹೇಳಿದ್ದಾರೆ.
ಅಲ್ಪಸಂಖ್ಯಾತ ಪ್ರಾಬಲ್ಯವಿರುವ ಉತ್ತರಪ್ರದೇಶದ ರಾಂಪುರ ಜಿಲ್ಲೆಯಿಂದ ರಾಷ್ಟ್ರವ್ಯಾಪಿ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಲಾಗುವುದು. ದೇಶದ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಕ್ಸಿನೇಷನ್ ಬಗ್ಗೆ ಜಾಗೃತಿ ಮೂಡಿಸಲು, ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಂದ ಹರಡುತ್ತಿರುವ ವದಂತಿಗಳನ್ನು ಹತ್ತಿಕ್ಕಲು ಈ ಅಭಿಯಾನ ಆರಂಭಿಸಲಾಗುವುದು ಎಂದು ನಖ್ವಿ ಹೇಳಿದರು.