ಕಾಸರಗೋಡು(ಕೇರಳ):ದೇಶಾದ್ಯಂತ ಕೋವಿಡ್ ಅಬ್ಬರ ಜೋರಾಗಿದೆ. ಇದೇ ಕಾರಣದಿಂದಾಗಿ ಬಹುತೇಕ ಎಲ್ಲ ರಾಜ್ಯಗಳಲ್ಲೂ ಆನ್ಲೈನ್ ಮೂಲಕವೇ ತರಗತಿಗಳು ನಡೆಯುತ್ತಿವೆ. ತರಗತಿ ನಡೆಯುತ್ತಿರುವ ಸಂದರ್ಭದಲ್ಲಿ ಕೆಲ ದುಷ್ಕರ್ಮಿಗಳು ನಕಲಿ ಐಪಿ ಅಡ್ರೆಸ್(IP address) ಬಳಸಿಕೊಂಡು ವಿಡಿಯೋ ಹರಿಬಿಡುವುದು, ಆಕ್ಷೇಪಾರ್ಹ ಪೋಸ್ಟ್ ಮಾಡುತ್ತಿದ್ದಾರೆ. ಇದೀಗ ಕೇರಳದಲ್ಲೂ ಅಂತಹದೊಂದು ಪ್ರಕರಣ ಬೆಳಕಿಗೆ ಬಂದಿದೆ.
ಕೇರಳದ ಕಾಞಂಗಾಡ್(Kanhangad) ಶಾಲೆವೊಂದರಲ್ಲಿ ಕಳೆದ ವಾರ ಆನ್ಲೈನ್ ತರಗತಿ ನಡೆಯುತ್ತಿತ್ತು. ಈ ವೇಳೆ ದುಷ್ಕರ್ಮಿಯೋರ್ವ ಸಂಪೂರ್ಣವಾಗಿ ಮುಖ ಮುಚ್ಚಿಕೊಂಡು, ಅರೆಬೆತ್ತಲೆಯಾಗಿ ಕಾಣಿಸಿಕೊಳ್ಳುವ ಮೂಲಕ ಡ್ಯಾನ್ಸ್ ಮಾಡಿದ್ದಾನೆ. ಈ ವೇಳೆ ವಿದ್ಯಾರ್ಥಿಗಳಿಗೆ ಆಪ್ಲೈನ್ ಆಗುವಂತೆ ಶಿಕ್ಷಕ ಸೂಚನೆ ನೀಡಿದ್ದಾರೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕೇರಳ ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ತನಿಖೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಪ್ರಾದೇಶಿಕ ಉಪನಿರ್ದೇಶಕರು ಶಾಲೆಗೆ ಭೇಟಿ ನೀಡಿ ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ.