ಮಥುರಾ (ಉತ್ತರ ಪ್ರದೇಶ):ತನ್ನ ಮನೆಯಿಂದ ಸುಮಾರು 500 ಮೀಟರ್ ದೂರದಲ್ಲಿಯೇ 9ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಕತ್ತುಹಿಸುಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.
ಮಥುರಾದ ಕೇಂದ್ರೀಯ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ 14 ವರ್ಷದ ಹರ್ಷ ಠಾಕೂರ್ ಬುಧವಾರ ಮನೆಯಿಂದ ಹೊರಗೆ ಹೋಗಿದ್ದನು. ಸಂಜೆಯವರೆಗೂ ಹಿಂತಿರುಗದಿದ್ದಾಗ ಪೋಷಕರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಆದರೆ, ಗುರುವಾರ ಮನೆಯಿಂದ ಸ್ವಲ್ಪ ದೂರದಲ್ಲಿ ಇರುವ ಕಾಡಿನಲ್ಲಿ ಆತ ಶವವಾಗಿ ಪತ್ತೆಯಾಗಿದ್ದಾನೆ. ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಬಾಲಕನನ್ನು ಕತ್ತುಹಿಸುಕಿ ಕೊಲ್ಲಲಾಗಿದೆ ಎಂಬುದು ತಿಳಿದು ಬಂದಿದೆ.