ಕರ್ನಾಟಕ

karnataka

ETV Bharat / bharat

ಹುಟ್ಟು ಹಬ್ಬದಂದು ಕರುಣಾನಿಧಿ-ಅಣ್ಣಾದುರೈಗೆ ಪುಷ್ಟನಮನ ಸಲ್ಲಿಸಿದ ಡಿಎಂಕೆ ಅಧ್ಯಕ್ಷ ಸ್ಟಾಲಿನ್ - tamilanadu latest News

ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದು, ಈ ವೇಳೆ ಚೆನ್ನೈನಲ್ಲಿರುವ ಅವರ ತಂದೆ ಮತ್ತು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ.

MK Stalin
ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್

By

Published : Mar 1, 2021, 1:17 PM IST

ಚೆನ್ನೈ (ತಮಿಳುನಾಡು): ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ತಮ್ಮ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಚೆನ್ನೈನಲ್ಲಿರುವ ಅವರ ತಂದೆ ಮತ್ತು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ಇನ್ನು ಇದೇ ವೇಳೆ ಆ್ಯನ್ನಾ ಸ್ಮಾರಕದಲ್ಲಿರುವ ಪಕ್ಷದ ಸ್ಥಾಪಕ ಮತ್ತು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಸಿ.ಎನ್.ಅಣ್ಣಾದುರೈ ಅವರಿಗೂ ಗೌರವ ಸಲ್ಲಿಸಿದರು.

ಸ್ಟಾಲಿನ್ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕೊಲತೂರ್ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಅರಿವಲಯಂನ ಡಿಎಂಕೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಈ ಬಗ್ಗೆ ತಿಳಿಸಿದ್ದಾರೆ. ಇನ್ನು ಈ ಬಾರಿಯೂ ಕೊಲತೂರ್ ಕ್ಷೇತ್ರದಿಂದ ಸ್ಪರ್ಧಿಸಿದರೆ, ಸತತ ಮೂರನೇ ಬಾರಿಯೂ ಅದೇ ಕ್ಷೇತ್ರದಿಂದ ಸ್ಪರ್ಧಿಸಿದಂತಾಗುತ್ತದೆ.

234 ಸದಸ್ಯರ ತಮಿಳುನಾಡು ವಿಧಾನಸಭಾ ಚುನಾವಣೆ ಏಪ್ರಿಲ್ 6 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 2 ರಂದು ಮತ ಎಣಿಕೆ ನಡೆಯಲಿದೆ.

ABOUT THE AUTHOR

...view details