ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ)ತ್ಯಜಿಸಿ ಬಿಜೆಪಿ ಸೇರಿದ್ದ ಮಾಜಿ ಶಾಸಕ ಗೌರಿ ಶಂಕರ್ ದತ್ತಾ ಕೋವಿಡ್ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಟಿಎಂಸಿಯಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ 70 ವರ್ಷದ ದತ್ತಾ ಇತ್ತೀಚೆಗೆ ಬಿಜೆಪಿ ಸೇರ್ಪಡೆಯಾಗಿದ್ದರು. ಕಳೆದ ಹತ್ತು ದಿನಗಳ ಹಿಂದೆ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಬಳಿಕ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು ಕೊಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂಓದಿ: ಸತ್ತ ಮಹಿಳೆ ಅಂತ್ಯ ಸಂಸ್ಕಾರ ಮಾಡಲು ಹೋಗುವಾಗ ಮತ್ತೇ ಜೀವಂತ: ಎರಡು ಬಾರಿ ಸಾವಿಗೀಡಾದ ಮಹಿಳೆ!
'ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ದೊರೆತರೂ ದತ್ತಾ ಅವರ ಆರೋಗ್ಯ ಮತ್ತಷ್ಟು ಬಿಗಡಾಯಿಸಿತ್ತು. ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಕಳೆದ ರಾತ್ರಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ' ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ನಾದಿಯಾ ಜಿಲ್ಲೆಯ ತೆಹಟ್ಟ ವಿಧಾನಸಭಾ ಕ್ಷೇತ್ರದಿಂದ 2016ರ ಚುನಾವಣೆಯಲ್ಲಿ ಟಿಎಂಸಿ ಪಕ್ಷದಿಂದ ಸ್ಪರ್ಧಿಸಿದ್ದ ದತ್ತಾ ಶಾಸಕರಾಗಿ ಆಯ್ಕೆಯಾಗಿದ್ದರು.